ಮಂಗಳೂರು: ಜಲೀಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಂಜಾಗೃತಾ ಕ್ರಮವಾಗಿ ಮಂಗಳೂರಿನ ಸುರತ್ಕಲ್ ಸೇರಿದಂತೆ ವಿವಿಧೆಡೆಗಳಲ್ಲಿ ಡಿಸೆಂಬರ್ 27ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.
ಈ ಕುರಿತು ಮಂಗಳೂರು ಪೊಲೀಸ್ ಆಯುಕ್ತ ಶಶಿಕುಮಾರ್ ಮಾಹಿತಿ ನೀಡಿದ್ದು, ಡಿ.24ರಂದು ಕಾಟಿಪಳ್ಳ ನಾಲ್ಕನೇ ಕ್ರಾಸ್ ನಲ್ಲಿ ಫಾತಿಮಾ ಸ್ಟೋರ್ ಬಳಿ ಅಂಗಡಿ ಮಾಲೀಕ ಅಬ್ದುಲ್ ಜಲೀಲ್ ಎಂಬಾತನನ್ನು ದುಷ್ಕರ್ಮಿಗಳು ಚಾಕು ಇರಿದು ಹತ್ಯೆ ಮಾಡಿದ್ದರು. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿರುವುದರಿಂದ 144 ಸೆಕ್ಷನ್ ಜಾರಿಗೊಳಿಸಲಾಗಿದೆ.
ಮಂಗಳೂರಿನ ಸುರತ್ಕಲ್, ಬಜ್ಪೆ, ಕಾವೂರು, ಪಣಂಬೂರು ವ್ಯಾಪ್ತಿಯಲ್ಲಿ ಇಂದಿನಿಂದ ಡಿ.27ರವರೆಗೆ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ತುರ್ತು ಸೇವೆ ಹಾಗೂ ಕ್ರಿಸ್ ಮಸ್ ಹಬ್ಬ ಆಚರಣೆಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.