ಬೆಂಗಳೂರು: ರಾಜ್ಯದ ವಿವಿಧೆಡೆಗಳಲ್ಲಿ ನಡೆಯುತ್ತಿರುವ ಜಾತ್ರಾ ಮಹೋತ್ಸವಗಳಲ್ಲಿ ಮುಸ್ಲಿಂ ವ್ಯಾಪಾರಿಗಳ ಅಂಗಡಿ ಇಡಲು ನಿಷೇಧ ಹೇರಲಾಗಿದ್ದು, ಈ ಬಗ್ಗೆ ಮುಸ್ಲೀಂ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಉಡುಪಿ, ಮಂಗಳೂರು, ಶಿವಮೊಗ್ಗ, ಬೆಂಗಳೂರಿನ ನೆಲಮಂಗಲದಲ್ಲಿ ನಡೆಯುತ್ತಿರುವ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶವಿಲ್ಲ ಎಂದು ದೇವಸ್ಥಾನದ ಆಡಳಿತ ಮಂಡಳಿಯಿಂದಲೇ ಬ್ಯಾನರ್ ಗಳನ್ನು ಹಾಕಲಾಗಿದ್ದು, ಈ ಬಗ್ಗೆ ಮುಸ್ಲೀಂ ವರ್ತಕರು ಅಂಗಡಿ ತೆರೆಯಲು ಮನವಿ ಮಾಡಿದರೂ ನಿರಾಕರಿಸಲಾಗಿದೆ. ಜಾತ್ರೆಗಳಲ್ಲಿ ಮುಸ್ಲೀಂ ವ್ಯಾಪಾರಿಗಳಿಗೆ ಅವಕಾಶ ನೀಡದಿರುವುದು ರಾಜ್ಯದಲ್ಲಿ ಮತ್ತೊಂದು ಧರ್ಮ ಸಂಘರ್ಷಕ್ಕೆ ಕಾರಣವಾಗಿದೆ. ಕೋರ್ಟ್ ತೀರ್ಪಿಗೆ ವಿರುದ್ಧವಾಗಿ ಹಿಂದೂ ಸಂಘಟನೆಗಳು ನಡೆದುಕೊಳ್ಳುತ್ತಿವೆ ಎಂದು ಮುಸ್ಲಿಂ ವರ್ತಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಗೋದಾಮಿನಲ್ಲಿ ಅಗ್ನಿ ಅವಘಡ: 11 ಮಂದಿ ಕಾರ್ಮಿಕರ ಸಜೀವ ದಹನ
ಈ ವಿಚಾರವಾಗಿ ಪ್ರತಿಕ್ರಿಯಿಸಿರುವ ಗೃಹ ಸಚಿವ ಅರಗ ಜ್ಞಾನೇಂದ್ರ, ಹಿಜಾಬ್ ವಿಚಾರವಾಗಿ ಕೋರ್ಟ್ ತೀರ್ಪು ವಿರೋಧಿಸಿ ಒಂದು ಕೋಮಿಗೆ ಸೇರಿದವರು ಬಂದ್ ಮಾಡಿ ಪ್ರತಿಕ್ರಿಯಿಸಿದರು. ಅದರ ಮುಂದುವರೆದ ಭಾಗವಾಗಿ ಹೀಗಾಗುತ್ತಿದೆ. ಇದು ದುರದೃಷ್ಟಕರ ಬೆಳವಣಿಗೆ. ವರದಿ ತರಿಸಿಕೊಂಡು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ಶಾಂತಿ-ಸುವ್ಯವಸ್ಥೆಗೆ ಧಕ್ಕೆಯಾಗದಂತೆ ನೋಡಿಕೊಳ್ಳಲಾಗುವುದು. ಇದಕ್ಕೆಲ್ಲ ಕಾಂಗ್ರೆಸ್ ತನ್ನ ಅಧಿಕಾರಕ್ಕಾಗಿ ಒಂದು ಕೋಮಿನ ಜನರನ್ನು ಓಲೈಕೆ ಮಾಡಿದ್ದೇ ಕಾರಣ. ಎಲ್ಲರ ಮನಸ್ಥಿತಿ ಒಡೆದಿದ್ದಾರೆ ಎಂದು ಕಿಡಿಕಾರಿದರು.