ತುಮಕೂರು: ರಾಮಲಿಂಗೇಶ್ವರ, ಚೌಡೇಶ್ವರಿ ಜಾತ್ರೆಯಲ್ಲಿ ಕೆಂಡ ಹಾಯುವಾಗ ನೂಕುನುಗ್ಗಲು ಉಂಟಾಗಿ ಅವಘಡ ಸಂಭವಿಸಿದ್ದು, 30ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆ ತುರುವೆಕೆರೆ ತಾಲೂಕಿನ ಮಾವಿನಕೆರೆ ಗ್ರಾಮದಲ್ಲಿ ನಡೆದಿದೆ.
35 ವರ್ಷಗಳ ಬಳಿಕ ನಡೆದ ರಾಮಲಿಂಗೇಶ್ವರ, ಚೌಡೇಶ್ವರಿ ಜಾತ್ರಾ ಮಹೋತ್ಸವದಲ್ಲಿ 50,000ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು. ಕೊಂಡ ಹಾಯುವ ವೇಳೆ ನೂಕುನುಗ್ಗಲು ಉಂಟಾಗಿದೆ. ಈ ವೇಳೆ ಅಗ್ನಿಕುಂಡದ ಬೆಂಕಿ ತಗುಲಿ 30ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.
ಗಾಯಾಳುಗಳಿಗೆ ತುರುವೆಕೆರೆ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.