ಬೆಂಗಳೂರು: ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಕೋರಿ ಮುರುಘಾಶ್ರೀಗಳು ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ.
ಪೋಕ್ಸೋ ಕಾಯ್ದೆಯಡಿ ನ್ಯಾಯಾಂಗ ಬಂಧನದಲ್ಲಿರುವ ಮುರುಘಾಶ್ರೀಗಳು ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಎಸ್.ಕೆ. ಬಸವರಾಜನ್ ಹಾಗೂ ಸೌಭಾಗ್ಯ ಚಿತಾವಣೆಯಿಂದ ಮುರುಘಾಶ್ರೀಗಳ ವಿರುದ್ಧ ಕೇಸ್ ದಾಖಲಿಸಲಾಗಿದೆ. ಸಂತ್ರಸ್ತರು ನೀಡಿದ ದೂರಿನಲ್ಲಿ ಯಾವುದೇ ಸತ್ಯಾಂಶವಿಲ್ಲ. ಈಗಾಗಲೇ ಓರ್ವ ಬಾಲಕಿ ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿಲ್ಲ ಎಂದು ತಿಳಿಸಿದ್ದಾಳೆ. ಹಾಗಾಗಿ ಮುರುಘಾ ಶ್ರೀಗಳಿಗೆ ಜಾಮೀನು ನೀಡುವಂತೆ ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಇನ್ನು ಮುರುಘಾ ಶ್ರೀಗಳ ವಿರುದ್ಧ ಮಠದ ಅಡುಗೆ ಸಹಾಯಕಿ ದೂರು ದಾಖಲಿಸಿದ್ದು, ತನ್ನ ಇಬ್ಬರು ಮಕ್ಕಳು ಸೇರಿ ನಾಲ್ವರು ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ದಾಗಿ ಪ್ರಕರಣ ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮುರುಘಾಶ್ರೀ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ.