ಬೆಂಗಳೂರು: ಜೆಡಿಎಸ್ ಹಿರಿಯ ಶಾಸಕ ಜಿ.ಟಿ.ದೇವೇಗೌಡ ಕಾಂಗ್ರೆಸ್ ಸೇರಲು ನಿರ್ಧರಿಸಿರುವ ಬೆನ್ನಲ್ಲೇ ಇದೀಗ ಜೆಡಿಎಸ್ ನ ಇನ್ನೋರ್ವ ಶಾಸಕ ಕೂಡ ಜೆಡಿಎಸ್ ತೊರೆಯಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.
ಇತ್ತೀಚೆಗಷ್ಟೇ ನಡೆದಿದ್ದ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷದ ಸೋಲಿನ ಹೊಣೆ ಹೊತ್ತು ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ರಾಜೀನಾಮೆ ನೀಡಿದ್ದ ಎನ್.ಹೆಚ್.ಕೋನರೆಡ್ದಿ ಇದೀಗ ಕಾಂಗ್ರೆಸ್ ಸೇರ್ಪಡೆಯತ್ತ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.
ಉಜ್ಜಯಿನಿ ಮಹಾಕಾಳೇಶ್ವರ ದೇಗುಲದಲ್ಲಿ ಭಕ್ತರಿಗಾಗಿ ಕೋವಿಡ್ ಲಸಿಕೆ ಅಭಿಯಾನ
ಮುಂಬರುವ ವಿಧಾನಸಭಾ ಚುನಾವಣೆ ನಿಟ್ಟಿನಲ್ಲಿ ಸಿದ್ಧತೆ ನಡೆಸಿರುವ ಕೋನರೆಡ್ದಿ ಈಗಾಗಲೇ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಇನ್ನಿತರ ಕಾಂಗ್ರೆಸ್ ನಾಯಕರ ಜೊತೆ ಒಂದು ಸುತ್ತಿನ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ನವಲಗುಂದದಿಂದ ಕಾಂಗ್ರೆಸ್ ನಿಂದ ಸ್ಪರ್ಧಿಸುವ ಬಗ್ಗೆಯೂ ಆಲೋಚನೆಯಲ್ಲಿದ್ದಾರೆ ಎಂಬ ಚರ್ಚೆ ಕೂಡ ರಾಜಕೀಯ ವಲಯದಲ್ಲಿ ಆರಂಭವಾಗಿದೆ.