ಕಲಬುರ್ಗಿ: ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆಯ ಮೇಲೆ ವ್ಯಕ್ತಿಯೋರ್ವ ಅತ್ಯಾಚರವೆಸಗಿರುವ ಘೋರ ಘಟನೆ ಕಲಬುರ್ಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ನಡೆದಿದೆ.
ಮಹಿಳೆ ಕಳೆದ 7 ತಿಂಗಳಿಂದ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ತಡರಾತ್ರಿ ಕಾಮುಕ ಆರೋಪಿ ಮಹಿಳೆಯ ಮೇಲೆ ಪೈಶಾಚಿಕ ಕೃತ್ಯವೆಸಗಿದ್ದಾನೆ. ಇದನ್ನು ಕಂಡ ಮತ್ತೋರ್ವ ವ್ಯಕ್ತಿ ಆರೋಪಿಯನ್ನು ಹಿಡಿದು ಆಸ್ಪತ್ರೆ ಸಿಬ್ಬಂದಿಗೆ ಒಪ್ಪಿಸಿದ್ದಾರೆ.
ಬ್ರಹ್ಮಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಧ್ಯ ಆರೋಪಿ ಮೆಹಬೂಬ ಪಾಷಾನನ್ನು ಪೊಲೀಸರು ಬಂಧಿಸಿದ್ದಾರೆ.