ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ಅಕ್ಕಿ ವಿತರಣೆಗೆ ಕೇಂದ್ರ ಸರ್ಕಾರ ನಿರಾಕರಿಸಿರುವ ಹಿನ್ನೆಲೆಯಲ್ಲಿ 10 ಕೆಜಿ ಅಕ್ಕಿ ವಿತರಣೆ ಸ್ವಲ್ಪ ತಡವಾಗಬಹುದು ಎಂದು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಜುಲೈ 1ರಿಂದ 10 ಕೆಜಿ ಅಕ್ಕಿ ವಿತರಣೆ ಮಾಡುವುದಾಗಿ ಹೇಳಿದ್ದೆವು. ಆದರೆ ಕೇಂದ್ರದಿಂದ ಅಕ್ಕಿ ಸಿಗುತ್ತಿಲ್ಲ. ಕೇಂದ್ರ ಸಚಿವರ ಭೇಟಿಗೂ ಅವಕಾಶ ಕೊಡುತ್ತಿಲ್ಲ. ಬೇರೆ ಬೇರೆ ರಾಜ್ಯದ ಜೊತೆ ಮಾತುಕತೆ ನಡೆದಿದೆ. ಹಾಗಾಗಿ ಜುಲೈ 1ರಿಂದ ಅಕ್ಕಿ ನೀಡುವ ಯೋಜನೆ ತಡವಾಗಬಹುದು. ಆಗಸ್ಟ್ ಒಳಗಾಗಿ ಅಕ್ಕಿ ನೀಡುತ್ತೇವೆ ಎಂದರು.
ಸಚಿವ ಪಿಯೂಷ್ ಗೋಯಲ್ ಭೇಟಿಗೆ ಅವಕಾಶ ಸಿಗುತ್ತಿಲ್ಲ. ಕಳೆದ ಮೂರು ದಿನಗಳಿಂದ ಭೇಟಿಗೆ ಕಾಲಾವಕಾಶ ಕೊಡುತ್ತಿಲ್ಲ. ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿದರು.