ರಾಜ್ಯದಲ್ಲಿ ಈ ಬಾರಿ ಮುಂಗಾರು ವಾಡಿಕೆಯಂತೆ ಆರಂಭವಾಗಿತ್ತಾದರೂ ಆ ಬಳಿಕ ಹಲವು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗಿತ್ತು. ಈ ಹಿನ್ನೆಲೆಯಲ್ಲಿ ಜಲಾಶಯಗಳು ತುಂಬುತ್ತವೋ ಇಲ್ಲವೋ ಎಂಬ ಆತಂಕ ರೈತಾಪಿ ವರ್ಗವನ್ನು ಕಾಡಿತ್ತು. ಇದೀಗ ಮಳೆ ಕುರಿತಂತೆ ಹವಾಮಾನ ಇಲಾಖೆ ಮಹತ್ವದ ಮಾಹಿತಿ ನೀಡಿದೆ.
ಜುಲೈ 12 ರಿಂದ 16ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಈ ಹಿನ್ನೆಲೆಯಲ್ಲಿ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಜುಲೈ 16ರವರೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಅಸಂಘಟಿತ ವಲಯದ ಕಾರ್ಮಿಕರು 2000 ರೂ. ಪ್ಯಾಕೇಜ್ ಪಡೆಯಲು ಇಲ್ಲಿದೆ ಮಾಹಿತಿ
ಅದೇ ರೀತಿ ಯಾದಗಿರಿ, ಕಲಬುರಗಿ, ವಿಜಯಪುರ, ಹಾವೇರಿ, ಧಾರವಾಡ ಬೀದರ್ ಹಾಗೂ ಬೆಳಗಾವಿ ಜಿಲ್ಲೆಗಳಲ್ಲೂ ಗುಡುಗು ಸಿಡಿಲು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.