ಬೆಂಗಳೂರು: ನಾಯಕತ್ವ ಬದಲಾವಣೆ ಚರ್ಚೆ ಬೆನ್ನಲ್ಲೇ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, ಮೂರು ದಿನಗಳ ರಾಜ್ಯ ಭೇಟಿಯ ಮಾಹಿತಿ ಲಭ್ಯವಾಗಿದೆ.
ಜೂನ್ 16ರಂದು ರಾಜ್ಯಕ್ಕೆ ಆಗಮಿಸಲಿರುವ ಅರುಣ್ ಸಿಂಗ್, ಅಂದು ಸಂಜೆ 5 ಗಂಟೆಗೆ ಬಿಜೆಪಿ ಕಚೇರಿಯಲ್ಲಿ ಸಚಿವರೊಂದಿಗೆ ಮಹತ್ವದ ಸಭೆ ನಡೆಸಲಿದ್ದಾರೆ. ಜೂನ್ 18ರಂದು ಸಂಜೆ 5 ಗಂಟೆಗೆ ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ಕರೆದಿದ್ದು, ಮಹತ್ವದ ನಿರ್ಧಾರ ಪ್ರಕಟಿಸುವ ಸಾಧ್ಯತೆಯಿದೆ.
ಈ ನಡುವೆ ಕೋರ್ ಕಮಿಟಿ ಸಭೆಗೂ ಮೊದಲೇ ಬಿಜೆಪಿ ಶಾಸಕರ ನಿಯೋಗ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಲಿದ್ದು, ನಾಯಕತ್ವ ಬದಲಾವಣೆ, ಪಕ್ಷದಲ್ಲಿನ ಸದ್ಯದ ಬೆಳವಣಿಗೆ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಲಿದ್ದಾರೆ ಎಂದು ತಿಳಿದುಬಂದಿದೆ.