ಬೆಂಗಳೂರು: ಕಲಬುರ್ಗಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಿದ್ದು, ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುವ ಮೂಲಕ ಮೇಯರ್ ಸ್ಥಾನದ ಅಧಿಕಾರದ ಚುಕ್ಕಾಣಿ ಹಿಡಿಯಲು ಬಿಜೆಪಿ ಮುಂದಾಗಿದೆ. ಆದರೆ ಜೆಡಿಎಸ್ ಮೇಯರ್ ಸ್ಥಾನಕ್ಕಾಗಿ ಪಟ್ಟು ಹಿಡಿದಿದೆ.
ಮೇಯರ್ ಸ್ಥಾನಕ್ಕಾಗಿ ಪಟ್ಟು ಬದಲಿಸದ ಜೆಡಿಎಸ್ ಅತ್ತ ಕಾಂಗ್ರೆಸ್ ಜೊತೆಯೂ ಮೈತ್ರಿ ಮಾತುಕತೆಗೆ ಸಿದ್ಧತೆ ನಡೆಸಿದೆ. ಈ ಹಿನ್ನೆಲೆಯಲ್ಲಿ ಜೆಡಿಎಸ್ ಜೊತೆ ಮಾತುಕತೆ ನಡೆಸಿ ಮನವೊಲಿಸುವ ಜವಾಬ್ದಾರಿಯನ್ನು ಬಿಜೆಪಿ ನಾಯಕರು ಸಿಎಂ ಬಸವರಾಜ್ ಬೊಮ್ಮಾಯಿ ಹೆಗಲಿಗೆ ವಹಿಸಿದ್ದಾರೆ.
ಏಕಾಏಕಿ ಪ್ರತ್ಯಕ್ಷವಾದ ಹಾವು ಕಂಡು ಬೆಚ್ಚಿಬಿದ್ಲು ಮಹಿಳೆ
ಕಲಬುರ್ಗಿ ಪಾಲಿಕೆ ವಿಚಾರವಾಗಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡು ಬಿಜೆಪಿ ಅಧಿಕಾರ ಹಿಡಿಯುವ ನಿಟ್ಟಿನಲ್ಲಿ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಜೊತೆ ಸಿಎಂ ಬಸವರಾಜ್ ಬೊಮ್ಮಾಯಿ ಮಾತುಕತೆ ನಡೆಸುವಂತೆ ಬಿಜೆಪಿ ನಾಯಕರು ಸೂಚಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಬೊಮ್ಮಾಯಿ ಜೆಡಿಎಸ್ ನಾಯಕರೊಂದಿಗೆ ಚರ್ಚಿಸಲು ನಿರ್ಧರಿಸಿದ್ದು, ಜೆಡಿಎಸ್ ಜೊತೆಗಿನ ಬಿಜೆಪಿ ಮೈತ್ರಿ ಅಂತಿಮವಾಗುವವರೆಗೂ ಮೇಯರ್ ಚುನಾವಣಾ ನೋಟಿಫಿಕೇಷನ್ ಹೊರಡಿಸುವುದು ಅನುಮಾನ ಎನ್ನಲಾಗಿದೆ.
ಸಿಎಂ ಬೊಮ್ಮಾಯಿ ಸ್ವತಃ ಜೆಡಿಎಸ್ ಜೊತೆ ಸಂಧಾನಕ್ಕೆ ಮುಂದಾಗಿರುವುದರಿಂದ ದಳಪತಿಗಳು ಪಟ್ಟು ಬದಲಿಸುವ ಸಾಧ್ಯತೆ ಇದ್ದು, ಮೇಯರ್ ಸ್ಥಾನ ಬಿಜೆಪಿಗೆ ಖಚಿತವಾಗುವ ಸಾಧ್ಯತೆ ದಟ್ಟವಾಗಿದೆ.