alex Certify BIG NEWS: ಜೆಡಿಎಸ್ ಪಂಚರತ್ನ ರಥಯಾತ್ರೆಗೆ ಚಾಲನೆ; ಯಾತ್ರೆ ಯಶಸ್ವಿಗೆ ಹೋಮ-ಹವನ; ಇಂದೇ ಅಭ್ಯರ್ಥಿಗಳ ಪಟ್ಟಿ ಪ್ರಕಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜೆಡಿಎಸ್ ಪಂಚರತ್ನ ರಥಯಾತ್ರೆಗೆ ಚಾಲನೆ; ಯಾತ್ರೆ ಯಶಸ್ವಿಗೆ ಹೋಮ-ಹವನ; ಇಂದೇ ಅಭ್ಯರ್ಥಿಗಳ ಪಟ್ಟಿ ಪ್ರಕಟ

ಕೋಲಾರ: 2023ರ ವಿಧಾನಸಭಾ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸುತ್ತಿರುವ ಜೆಡಿಎಸ್ ಪಂಚರತ್ನ ರಥ ಯಾತ್ರೆಗೆ ಕೋಲಾರದಲ್ಲಿ ಚಾಲನೆ ನೀಡಿದೆ.

ಕೋಲಾರದ ಕುರುಡುಮಲೆ ದೇವಸ್ಥಾನದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.‌ ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಜೆಡಿಎಸ್ ಪಂಚರತ್ನ ರಥಯಾತ್ರೆಗೆ ಚಾಲನೆ ನೀಡಿದರು.

ರಥಯಾತ್ರೆಗೂ ಮುನ್ನ ದೇವಾಲಯದಲ್ಲಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡರು ಯಾತ್ರೆ ಯಶಸ್ವಿಯಾಗಲಿ ಎಂದು ಹೋಮ-ಹವನವನ್ನು ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಸ್ವತಂತ್ರವಾಗಿ ಅಧಿಕಾರಕ್ಕೆ ಬರುವ ವಿಶ್ವಾಸವಿದೆ. ಆ ನಿಟ್ಟಿನಲ್ಲಿ ಪಂಚರತ್ನ ಯಾತ್ರೆಯಲ್ಲಿ ಯೋಜನೆಗಳನ್ನು ರೂಪಿಸಲಾಗಿದೆ. ಇಂದೇ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸುವ ಬಗ್ಗೆಯೂ ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...