ಯಾದಗಿರಿ; ಬಿಜೆಪಿ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿರುವ ಘಟನೆ ಯಾದಗಿರಿ ಜಿಲ್ಲೆಯ ಕಾವೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿ ನಡೆದ ಅಡಿಗಲ್ಲು ಸಮಾರಂಭವೊಂದರಲ್ಲಿ ಎರಡು ಪಕ್ಷಗಳ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು ನಾಯಕರ ಮುಂದೆಯೇ ಹೊಡೆದಾಡಿಕೊಂಡಿದ್ದಾರೆ. ಜೆಡಿಎಸ್ ಶಾಸಕ ನಾಗನಗೌಡ ಕಂದಕೂರ ಹಾಗೂ ಮಾಜಿ ಸಚಿವ ಬಾಬುರಾವ್ ಚಿಂಚನಸೂರ ಬೆಂಬಲಿಗರ ಮಧ್ಯೆ ವೇದಿಕೆಯ ಎದುರೆ ಮಾರಾಮಾರಿ ನಡೆದಿದೆ.
ಕಾರ್ಯಕ್ರಮದಲ್ಲಿ ಹಾಕಿದ ಬ್ಯಾನರ್ ವಿಚಾರವಾಗಿ ನಡೆದ ಗಲಾಟೆ ಎರಡೂ ಪಕ್ಷಗಳ ಕಾರ್ಯಕರ್ತರ ನಡುವಿನ ಮಾರಾಮಾರಿಗೆ ಕಾರಣವಾಗಿದೆ. ಸಮಾರಂಭದ ಮಧ್ಯೆಯೇ ಕಾರ್ಯಕರ್ತರು ಹೊಡೆದಾಡಿಕೊಂಡಿದ್ದು, ಪೊಲಿಸರು ಕಾರ್ಯಕರ್ತರನ್ನು ನಿಯಂತ್ರಿಸಲು ಹರಸಾಹಸಪಟ್ಟಿದ್ದಾರೆ.