ಜುಲೈ 18ರಂದು ನಡೆಯುವ ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್ ಡಿಎ ಅಭ್ಯರ್ಥಿಯಾಗಿ ಜಾರ್ಖಂಡ್ ಮಾಜಿ ರಾಜ್ಯಪಾಲೆ ದ್ರೌಪದಿ ಮುರ್ಮು ಕಣಕ್ಕಿಳಿದಿದ್ದಾರೆ. ಯುಪಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಸ್ಪರ್ಧಿಸುತ್ತಿದ್ದಾರೆ.
ಈಗಾಗಲೇ ನಾಮಪತ್ರ ಸಲ್ಲಿಸಿರುವ ದ್ರೌಪದಿ ಮುರ್ಮು ಸೋಮವಾರದಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರಿಗೆ ಕರೆ ಮಾಡಿ ಬೆಂಬಲ ನೀಡುವಂತೆ ಕೋರಿದ್ದಾರೆ. ಇದೇ ಸಂದರ್ಭದಲ್ಲಿ ತಮಗೆ ಈಗಾಗಲೇ ಬೆಂಬಲ ಸೂಚಿಸಿರುವ ಮಾಯಾವತಿ ಅವರೊಂದಿಗೂ ದ್ರೌಪದಿ ಮುರ್ಮು ಮಾತನಾಡಿದ್ದಾರೆ ಎನ್ನಲಾಗಿದೆ.
ದ್ರೌಪದಿ ಮುರ್ಮು ಸ್ಪರ್ಧೆ ಕುರಿತು ಮಾತನಾಡಿದ್ದ ದೇವೇಗೌಡರು, ಅವರು ರಾಜ್ಯಪಾಲರಾಗಿದ್ದ ಸಂದರ್ಭದಲ್ಲಿ ಉತ್ತಮ ಕಾರ್ಯ ಮಾಡಿದ್ದಾರೆ. ಸಚಿವರಾಗಿಯೂ ಅವರು ಯಶಸ್ವಿಯಾಗಿದ್ದಾರೆ ಎಂದಿದ್ದರು. ಹೀಗಾಗಿ ದ್ರೌಪದಿ ಮುರ್ಮು ಅವರಿಗೆ ದೇವೇಗೌಡರು ಬೆಂಬಲ ಸೂಚಿಸಬಹುದು ಎಂಬ ಮಾತುಗಳು ಕೇಳಿ ಬರುತ್ತಿವೆ.