alex Certify BIG NEWS: ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ; ಮಾಜಿ ಶಾಸಕ ಬಾಲಕೃಷ್ಣ ಕಾರಿನ ಮೇಲೆ ಕಲ್ಲು ತೂರಾಟ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ; ಮಾಜಿ ಶಾಸಕ ಬಾಲಕೃಷ್ಣ ಕಾರಿನ ಮೇಲೆ ಕಲ್ಲು ತೂರಾಟ

ರಾಮನಗರ: ಹಾಲು ಉತ್ಪಾದಕರ ಸಹಕಾರ ಸಂಘದ ಉದ್ಘಾಟನೆ ವೇಳೆ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದು ಮಾಜಿ ಶಾಸಕ ಹೆಚ್.ಸಿ. ಬಾಲಕೃಷ್ಣ ಕಾರಿನ ಮೇಲೆ ಕಲ್ಲು ತೂರಾಟ ನಡೆದ ಘಟನೆ ನಡೆದಿದೆ.

ರಾಮನಗರದ ಮಾಗಡಿ ತಾಲೂಕಿನ ಕಾಮಸಾಗರದಲ್ಲಿ ಈ ಘಟನೆ ನಡೆದಿದ್ದು, ಒಳರಾಜಕೀಯ ಹಾಗೂ ಶಿಷ್ಠಾಚಾರ ಪಾಲನೆ ಮಾಡುತ್ತಿಲ್ಲ ಎಂದು ಆರೋಪಿಸಿ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಗಲಾಟೆ ಆರಂಭವಾಗಿದೆ. ವಾಗ್ವಾದ ವಿಕೋಪಕ್ಕೆ ತಿರುಗಿ ಕಾರ್ಯಕರ್ತರ ಮೇಲೆ ಮಾರಾಮಾರಿ ನಡೆದಿದೆ. ಈ ವೇಳೆ ಉದ್ಘಾಟನಾ ಕಾರ್ಯಕ್ರಮಕ್ಕೆ ಬಂದಿದ್ದ ಮಾಜಿ ಶಾಸಕ ಬಾಲಕೃಷ್ಣ ಕಾರಿನ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ.

ಸ್ಥಳದಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದ್ದು, ಪೊಲೀಸರ ಮೇಲೂ ಕಲ್ಲು ತೂರಾಟ ನಡೆಸಲಾಗಿದೆ ಎಂದು ತಿಳಿದುಬಂದಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...