ಬೆಳಗಾವಿ: ಯೋಗೀಶ್ ಗೌಡ ಕೊಲೆ ಕೇಸ್ ನಲ್ಲಿ ಜೈಲು ಸೇರಿದ್ದ ಮಾಜಿ ಸಚಿವ ವಿನಯ್ ಕುಲಕರ್ಣಿ ಬೆಳಗಾವಿ ಹಿಂಡಲಗಾ ಜೈಲಿನಿಂದ ಬಿಡುಗಡೆಯಾಗಿದ್ದು, ನಾನು ನಿರ್ದೋಷಿಯಾಗಿ ಹೊರ ಬರುತ್ತೇನೆ ಎಂಬ ವಿಶ್ವಾಸವಿತ್ತು. ಹಾಗಾಗಿ ನನಗೆ ಸುಪ್ರೀಂ ಕೋರ್ಟ್ ನಿಂದ ಜಾಮೀನು ಸಿಕ್ಕಿದೆ. ಪ್ರಕರಣದಿಂದ ಶೀಘ್ರದಲ್ಲಿ ಹೊರಬರುತ್ತೇನೆ ಎಂದು ತಿಳಿಸಿದ್ದಾರೆ.
ಜೈಲಿನಿಂದ ಬಿಡುಗಡೆಯಾಗಿ ಹೊರಬರುತ್ತಿದ್ದಂತೆ ಮೊದಲ ಪ್ರತಿಕ್ರಿಯೆ ನೀಡಿದ ಮಾಜಿ ಸಚಿವ, ಜೈಲಿನಲ್ಲಿದ್ದಾಗ ಸಾಕಷ್ಟು ವಿಚಾರಗಳನ್ನು ಕಲಿತಿದ್ದೇನೆ. ನನಗೆ ಪುಸ್ತಕ ಓದುವ ಅಭ್ಯಾಸವೇ ಇರಲಿಲ್ಲ. ಜೈಲಿನಲ್ಲಿ ಪುಸ್ತಕ ಓದುವುದನ್ನು ಕಲಿತೆ. ಮುಂದಿನ ಜೀವನದಲ್ಲಿ ಹೇಗಿರಬೇಕು ಎಂಬ ಪಾಠ ಕಲಿತಿದ್ದೇನೆ. ಉಳಿದ ರಾಜಕಾರಣಿಗಳೇ ಬೇರೆ, ನಾನೇ ಬೇರೆ, ನಾನು ಮೂಲತಃ ಓರ್ವ ರೈತ. ಶೀಘ್ರದಲ್ಲಿ ಈ ಪ್ರಕರಣದಿಂದ ಹೊರ ಬರುತ್ತೇನೆ ಎಂದು ಹೇಳಿದರು.
BIG NEWS: ಆಫ್ಘನ್ ನಲ್ಲಿ ಅಟ್ಟಹಾಸ ಮೆರೆಯುತ್ತಿದ್ದ ತಾಲಿಬಾನ್ ಉಗ್ರರಿಗೆ ಬಿಗ್ ಶಾಕ್; 3 ಜಿಲ್ಲೆ ಮರಳಿ ವಶಕ್ಕೆ ಪಡೆದ ಸೇನೆ
ನಾನು ನಿರಪರಾಧಿ. ನನ್ನ ಮೇಲೆ ಭರವಸೆಯಿಟ್ಟು ಜಾಮೀನು ನೀಡಿರುವುದಕ್ಕೆ ಸುಪ್ರೀಂ ಕೋರ್ಟ್ ಗೆ ಧನ್ಯವಾದ. ನನ್ನ ಬಿಡುಗಡೆಗಾಗಿ ಶ್ರಮಿಸಿದ ಕುಟುಂಬದವರಿಗೆ ಹಾಗೂ ಎಲ್ಲರಿಗೂ ಧನ್ಯವಾದ ಎಂದು ಹೇಳಿದರು.