ಬೆಂಗಳೂರು: ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ಫೋನ್ ಕದ್ದಾಲಿಕೆ ಪ್ರಕರಣದ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ತಿಳಿಸಿದ್ದಾರೆ.
ಈ ವೆಬ್ ಸೈಟ್ ನಲ್ಲಿ ಹಳೆ ಬಟ್ಟೆ ಮಾರಾಟ ಮಾಡಿ ʼಹಣʼ ಗಳಿಸಿ
ಶಾಸಕ ಬೆಲ್ಲದ್ ಅವರಿಗೆ ಜೈಲಿನಲ್ಲಿರುವ ಯುವರಾಜ ಸ್ವಾಮಿ ಎಂಬುವವರಿಂದ ಕರೆ ಬಂದಿದ್ದು, ಫೋನ್ ಕದ್ದಾಲಿಕೆ ಮಾಡುತ್ತಿರುವ ಬಗ್ಗೆ ಸ್ವತಃ ಶಾಸಕರು ಆರೋಪಿಸಿದ್ದರು. ಈ ಕುರಿತು ಮಾತನಾಡಿರುವ ಪೊಲೀಸ್ ಆಯುಕ್ತ ಕಮಲ್ ಪಂತ್, ಫೋನ್ ಕದ್ದಾಲಿಕೆ ಬಗ್ಗೆ ತನಿಖೆ ನಡೆಸುವಂತೆ ಡಿಜಿ, ಐಜಿಪಿ ಕಚೇರಿಯಿಂದ ಪತ್ರ ಬಂದಿದ್ದು, ಸೂಚನೆ ಮೇರೆಗೆ ತನಿಖೆ ನಡೆಸಲಾಗುತ್ತಿದೆ ಎಂದರು.
ಗನ್ ಮ್ಯಾನ್ ಅನುಮಾನಾಸ್ಪದ ಸಾವು; ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಶಂಕೆ…!
ತಮ್ಮ ಫೋನ್ ಕದ್ದಾಲಿಕೆ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಈ ಬಗ್ಗೆ ತನಿಖೆ ನಡೆಸುವಂತೆ ಶಾಸಕ ಅರವಿಂದ್ ಬೆಲ್ಲದ್ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹಾಗೂ ಸ್ಪೀಕರ್ ಕಾಗೇರಿಗೆ ಪತ್ರ ಬರೆದಿದ್ದರು.