ಹಾವೇರಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಿಡುಗಡೆಗೊಳಿಸಿರುವ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳ ಬ್ಯಾನ್ ಮಾಡುವುದಾಗಿ ಘೋಷಿಸಿದ್ದು, ಬಿಜೆಪಿ ನಾಯಕರ ಆಕ್ರೋಶಕ್ಕೆ ಕಾರಣವಾಗಿದೆ.
ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ಚುನಾವಣಾ ಪ್ರಚಾರದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಕಾಂಗ್ರೆಸ್ ವಿರುದ್ಧ ಕಿಡಿ ಕಾರಿದ್ದಾರೆ. ಬಜರಂಗದಳ ಬ್ಯಾನ್ ಮಾಡಲು ಸಾಧ್ಯವಿಲ್ಲ ಎಂದು ಗುಡುಗಿದ್ದಾರೆ.
ಅಲ್ಲದೇ ಜೈ ಶ್ರೀರಾಮ್, ಜೈ ಬಜರಂಗಬಲಿ ಎಂದು ಘೋಷಣೆ ಕೂಗಿದ್ದು, ತಮ್ಮ ಹೆಗಲ ಮೇಲಿದ್ದ ಕೇಸರಿ ಶಾಲನ್ನು ಬೀಸುವ ಮೂಲಕ ಕಾಂಗ್ರೆಸ್ ನಾಯಕರಿಗೆ ತಿರುಗೇಟು ಕೊಟ್ಟಿದ್ದಾರೆ.