ಬೆಳಗಾವಿ: ಜೋತು ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ 7 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಾಮಸಿಕೊಪ್ಪ ಗ್ರಾಮದಲ್ಲಿ ನಡೆದಿದೆ.
7 ವರ್ಷದ ಬಸಪ್ಪ ಕೋಲ್ಕಾರ ಮೃತ ಬಾಲಕ. ಹೆಸ್ಕಾಂ ಸಿಬ್ಬಂದಿಗಳು ವಿದ್ಯುತ್ ಕಂಬದ ಬದಲು ಮರದ ಕಂಬ ನೆಟ್ಟು ವಿದ್ಯುತ್ ತಂತಿ ಎಳೆದಿದ್ದರು. ಪರಿಣಾಮ ವಿದ್ಯುತ್ ತಂತಿ ಜೋತು ಬಿದ್ದಿತ್ತು. ಜೋತು ಬಿದ್ದಿದ್ದ ವಿದ್ಯುತ್ ತಂತಿ ಸ್ಪರ್ಶಿಸಿ ಬಾಲಕ ಸಾವನ್ನಪ್ಪಿದ್ದಾನೆ.
ಹೆಸ್ಕಾ ಅಧಿಕಾರಿಗಳ ನಿರ್ಲಕ್ಷದಿಂದಾಗಿಯೇ ದುರಂತ ಸಂಭವಿಸಿದ್ದು, ಬಾಲಕನ ಸಾವಿಗೆ ಹೆಸ್ಕಾಂ ಅಧಿಕಾರಿಗಳೇ ಕಾರಣ ಎಂದು ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಖಾನಾಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.