ಉಡುಪಿ: ಉಡುಪಿ ಹಾಗೂ ಕುಂದಾಪುರ ಕಾಲೇಜುಗಳಲ್ಲಿ ಹಿಜಾಬ್ ಹಾಗೂ ಕೇಸರಿ ಶಾಲು ವಿವಾದ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದ್ದು, ಮುಸ್ಲಿಂ ವಿದ್ಯಾರ್ಥಿಗಳು ಹಿಜಾಬ್ ಧರಿಸಿ ಕಾಲೇಜಿಗೆ ಬಂದರೆ, ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಆಗಮಿಸುತ್ತಿದ್ದು, ವಿದ್ಯಾ ಕೇಂದ್ರ, ಜ್ಞಾನ ದೇಗುಲಗಳು ವಿದ್ಯಾರ್ಥಿ ದಿಸೆಯಲ್ಲಿಯೇ ಧರ್ಮ ಸಂಘರ್ಷಕ್ಕೆ ರಹದಾರಿ ಮಾಡುತ್ತಿವೆಯೇ ಎಂಬ ಆತಂಕದ ವಾತಾವರಣ ಸೃಷ್ಟಿಯಾಗುತ್ತಿವೆ.
ನಿನ್ನೆ ಉಡುಪಿಯ ಕಾಲೇಜಿನ ಹಲವು ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ಕಾಲೇಜಿಗೆ ಬಂದಿದ್ದರು. ಕಾಲೇಜು ಆಡಳಿತ ಸಿಬ್ಬಂದಿಗಳು ಹಾಗೂ ಪ್ರಾಶುಪಾಲರು ವಿದ್ಯಾರ್ಥಿಗಳನ್ನು ತರಗತಿಗೆ ಬರದಂತೆ ತಡೆ ನೀಡಿ, ವಾಪಸ್ ಕಳುಹಿಸಿದ್ದರು. ಕಾಲೇಜಿನಲ್ಲಿ ಯಾವುದೇ ಧರ್ಮ, ಆಚರಣೆಗಳಿಗೆ ಅವಕಾಶವಿಲ್ಲ ಎಂದು ಪ್ರಾಂಶುಪಾಲರು ಸೂಚನೆ ನೀಡಿದ್ದರು.
BIG NEWS: 2020 ರ ಗಾಲ್ವಾನ್ ಸಂಘರ್ಷದ ಬಗ್ಗೆ ಸ್ಫೋಟಕ ಮಾಹಿತಿ ಬಯಲು
ಇದರ ಬೆನ್ನಲ್ಲೇ ಇಂದು ಕುಂದಾಪುರದ ಭಂಡಾರ್ಕರ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸಿದ್ದು, ಈ ವೇಳೆ ಪ್ರಾಂಶುಪಾಲರು ಕಾಲೇಜು ಗೇಟ್ ಹೊರಗೆ ವಿದ್ಯಾರ್ಥಿಗಳನ್ನು ತಡೆದಿದ್ದಾರೆ.
ಹಿಜಾಬ್ ಅಥವಾ ಕೇಸರಿ ಶಾಲು ಧರಿಸಿ ಕಾಲೇಜಿಗೆ ಬರಲು ಅವಕಾಶವಿಲ್ಲ. ಕಾಲೇಜಿನಲ್ಲಿ ಸಮವಸ್ತ್ರವಿದ್ದು, ಸಮವಸ್ತ್ರ ಧರಿಸಿ ಬಂದವರು ಮಾತ್ರ ಕಾಲೇಜು ಒಳಗೆ ಪ್ರವೇಶಿಸಲು ಅವಕಾಶ ನೀಡಲಾಗುವುದು ಎಂದು ಹೇಳಿ ಕಾಲೇಜು ಗೇಟ್ ಹಾಕುವ ಮೂಲಕ ವಿದ್ಯಾರ್ಥಿಗಳಿಗೆ ಪ್ರಾಂಶುಪಾಲರು ಖಡಕ್ ಸಂದೇಶ ರವಾನಿಸಿದ್ದಾರೆ.