ಬೆಂಗಳೂರು: 2023ರ ವಿಧಾನಸಭಾ ಚುನಾವಣೆಗೆ ಆಡಳಿತಾರೂಢ ಬಿಜೆಪಿ, ವಿಪಕ್ಷ ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಈಗಿನಿಂದಲೇ ಸಿದ್ಧತೆ ನಡೆಸಿದ್ದು, ಒಂದು ಹೆಜ್ಜೆ ಮುಂದಡಿಯಿಟ್ಟಿರುವ ಜೆಡಿಎಸ್ ಅಭ್ಯರ್ಥಿಗಳ ಪಟ್ಟಿಯನ್ನು ತಯಾರಿಸಿದೆ. ಚುನಾವಣೆಗೆ ಎರಡು ವರ್ಷ ಬಾಕಿಯಿರುವಾಗಲೇ ಅಭ್ಯರ್ಥಿಗಳ ಘೋಷಣೆಗೆ ಜೆಡಿಎಸ್ ಮುಂದಾಗಿದೆ.
ಬೆಂಗಳೂರಿನಲ್ಲಿ ಮಾತನಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಚುನಾವಣೆಗೆ ಎರಡು ವರ್ಷ ಸಮಯವಿರುವಾಗಲೇ ಕಾಂಗ್ರೆಸ್ ಈಗಲೇ ಅಧಿಕಾರದ ಕನಸು ಕಾಣುತ್ತಿದೆ. ಒನ್ನೊಂದು ಸಲ ಒಬ್ಬೊಬ್ಬರು ನಾನೇ ಸಿಎಂ ಎನ್ನುತ್ತಿದ್ದಾರೆ. ನಾವು ಕೂಡ ಈಗಲೇ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡುತ್ತೇವೆ ಎಂದು ವ್ಯಂಗ್ಯವಾಡಿದರು.
ಭಾರತದಿಂದ ನಮ್ಮ ದೇಶಕ್ಕೆ ಬರಲು ಪರ್ಯಾಯ ಮಾರ್ಗ ಹುಡುಕಿಕೊಳ್ಳಿ ಎಂದ ಕೆನಡಾ
ಜನವರಿ.15ರೊಳಗೆ 150 ಅಭ್ಯರ್ಥಿಗಳನ್ನು ಘೋಷಣೆ ಮಾಡುತ್ತೇವೆ. ಚುನಾವಣೆಗೆ ಒಂದು ವರ್ಷ ಬಾಕಿ ಇರುವಾಗಲೇ ಜೆಡಿಎಸ್ ಅಭ್ಯರ್ಥಿಗಳ ಹೆಸರನ್ನು ಘೋಷಿಸಲಿದೆ ಎಂದರು.