ಉಡುಪಿ: ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಹೆಚ್ಚುತ್ತಿದ್ದು, ಚಿಕ್ಕ ಮಕ್ಕಳಲ್ಲಿ ಕೂಡ ಸೋಂಕು ವೇಗವಾಗಿ ಹರಡುತ್ತಿರುವುದರಿಂದ ಸೋಂಕು ನಿಯಂತ್ರಣಕ್ಕೆ ಆಗಸ್ಟ್ 15ರ ಬಳಿಕ ಟಫ್ ರೂಲ್ಸ್ ಜಾರಿಗೆ ತರುವ ಸಾಧ್ಯತೆ ದಟ್ಟವಾಗಿದೆ.
ಈ ಬಗ್ಗೆ ಉಡುಪಿಯಲ್ಲಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಕೊರೊನಾ ಸೋಂಕು ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಬೆಂಗಳೂರಿಗೆ ತೆರಳಿದ ಬಳಿಕ ಅಧಿಕಾರಿಗಳ ಸಭೆ ನಡೆಸಿ ತಜ್ಞರ ಸಲಹೆಯಂತೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದಿದ್ದಾರೆ. ಈ ಮೂಲಕ ಟಫ್ ರೂಲ್ಸ್ ಜಾರಿ ಸುಳಿವು ನೀಡಿದ್ದಾರೆ.
18.45 ಸೆಕೆಂಡ್ ಗಳಲ್ಲಿ 2 ಲೀ. ಸೋಡಾ ಕುಡಿದು ಗಿನ್ನೆಸ್ ದಾಖಲೆ
ಈ ನಡುವೆ ಬಿಬಿಎಂಪಿ ಆಯುಕ್ತ ಗೌರವ್ ಗುಪ್ತಾ ಕೂಡ ಬೆಂಗಳೂರಿನಲ್ಲಿ ಕೋವಿಡ್ ಪರಿಸ್ಥಿತಿ ಗಂಭೀರವಾಗುತ್ತಿದ್ದು, ಹೆಚ್ಚಿನ ನಿಗಾ ವಹಿಸಲಾಗಿದೆ. ಪಾಸಿಟಿವಿಟಿ ರೇಟ್ ಶೇ.2ಕ್ಕಿಂತ ಹೆಚ್ಚು ಕಂಡು ಬಂದರೆ ಬೆಂಗಳೂರಿನಲ್ಲಿ ಬಿಗಿಕ್ರಮ ಕೈಗೊಳ್ಳಲಾಗುವುದು. ಕಳೆದ 40 ದಿನಗಳಿಂದ 400ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗುತ್ತಿವೆ. ಮಕ್ಕಳಲ್ಲಿ ಕೂಡ ಸೋಂಕು ಹೆಚ್ಚುತ್ತಿದೆ. ಈ ನಿಟ್ಟಿನಲ್ಲಿ ಸಿಎಂ ಬೊಮ್ಮಾಯಿ ಜೊತೆ ಚರ್ಚಿಸಿ ಆ.15ರ ಬಳಿಕ ಕಠಿಣ ನಿಯಮ ಜಾರಿ ಬಗ್ಗೆ ನಿರ್ಧರಿಸಲಾಗುವುದು ಎಂದರು.