alex Certify BIG NEWS: ಟಿಕೆಟ್ ಗಾಗಿ ಇನಾಯತ್ 2 ಕೋಟಿ ನೀಡಿದ್ದಾರೆ; ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಟಿಕೆಟ್ ಮಾರಾಟ ಮಾಡಿದ್ದಾರೆ; ಮೊಯಿದ್ದೀನ್ ಬಾವಾ ಆರೋಪ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಟಿಕೆಟ್ ಗಾಗಿ ಇನಾಯತ್ 2 ಕೋಟಿ ನೀಡಿದ್ದಾರೆ; ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಟಿಕೆಟ್ ಮಾರಾಟ ಮಾಡಿದ್ದಾರೆ; ಮೊಯಿದ್ದೀನ್ ಬಾವಾ ಆರೋಪ

ಮಂಗಳೂರು: ಮಂಗಳೂರು ಉತ್ತರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಅಕಾಂಕ್ಷಿಯಾಗಿದ್ದ ಶಾಸಕ ಮೋಯಿದ್ದೀನ್ ಬಾವಾ ಅವರಿಗೆ ಟಿಕೆಟ್ ಕೈತಪ್ಪಿದ್ದು, ಕಾಂಗ್ರೆಸ್ ವಿರುದ್ಧ ಸಿಡಿದೆದ್ದಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕಾಂಗ್ರೆಸ್ ಟಿಕೆಟ್ ಮಾರಾಟ ಮಾಡಿದ್ದಾರೆ. ಕಾಂಗ್ರೆಸ್ ಟಿಕೆಟ್ ಗಾಗಿ ಇನಾಯತ್ ಅಲಿ 2 ಕೋಟಿ ರೂಪಾಯಿ ಕೊಟ್ಟಿದ್ದಾರೆ. ಡಿಕೆಶಿ ಕೇಸ್ ನಲ್ಲಿ ಇನಾಯತ್ ಅಲಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. 6 ತಿಂಗಳ ಹಿಂದಷ್ಟೇ ಜಿಲ್ಲೆಗೆ ಬಂದ ಗುತ್ತಿಗೆದಾರನಿಗೆ ಟಿಕೆಟ್ ಮಾರಾಟ ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿ ವಿರುದ್ಧ ಭ್ರಷ್ಟಾಚಾರ ಕುರಿತು ಮಾತನಾಡಲು ಕಾಂಗ್ರೆಸ್ ಗೆ ನೈತಿಕತೆ ಇಲ್ಲ. ವಾಮಮಾರ್ಗ ಉಪಯೋಗಿಸಿ ಕಾಂಗ್ರೆಸ್ ಟಿಕೆಟ್ ತಪ್ಪಿಸಿದ್ದಾರೆ ಎಂದು ಆರೋಪ ಮಾಡಿದರು.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...