alex Certify BIG NEWS: ಟಿಕೆಟ್ ಸಿಗುವ ಸಾಧ್ಯತೆ ಕ್ಷೀಣಿಸಿದ ಬೆನ್ನಲ್ಲೇ ಬಿಜೆಪಿ ತೊರೆಯಲು ಮುಂದಾದ ಶೆಟ್ಟರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಟಿಕೆಟ್ ಸಿಗುವ ಸಾಧ್ಯತೆ ಕ್ಷೀಣಿಸಿದ ಬೆನ್ನಲ್ಲೇ ಬಿಜೆಪಿ ತೊರೆಯಲು ಮುಂದಾದ ಶೆಟ್ಟರ್

ಹುಬ್ಬಳ್ಳಿ – ಧಾರವಾಡ ಸೆಂಟ್ರಲ್ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ತಮಗೆ ಅವಕಾಶ ಸಿಗುವುದಿಲ್ಲವೆಂಬುದು ಖಾತ್ರಿಯಾಗುತ್ತಿದ್ದಂತೆ ಪಕ್ಷ ತೊರೆಯಲು ಮುಂದಾಗಿದ್ದಾರೆ.

ಶಿರಸಿಯಲ್ಲಿ ಇಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ತಮ್ಮ ಶಾಸಕ ಸ್ಥಾನದ ರಾಜೀನಾಮೆ ಸಲ್ಲಿಸಲಿರುವ ಅವರು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ಗುಡ್ ಬೈ ಹೇಳಲಿದ್ದಾರೆ. ಈ ಮೂಲಕ ಬಿಜೆಪಿಯ ಹಿರಿಯ ನಾಯಕರೊಬ್ಬರು ಪಕ್ಷ ಬಿಟ್ಟಂತಾಗುತ್ತದೆ.

ಜಗದೀಶ್ ಶೆಟ್ಟರ್ ಅವರ ಮನವೊಲಿಸಲು ಬಿಜೆಪಿ ಹೈಕಮಾಂಡ್ ಕೊನೆ ಕ್ಷಣದವರೆಗೂ ಪ್ರಯತ್ನ ನಡೆಸಿತ್ತಾದರೂ ಯಾವುದೇ ಪ್ರಯೋಜನವಾಗಲಿಲ್ಲ. ಬಿಜೆಪಿ ತೊರೆಯಲಿರುವ ಜಗದೀಶ್ ಶೆಟ್ಟರ್ ಈ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತವಾಗಿದ್ದು, ಆದರೆ ಯಾವ ಪಕ್ಷದಿಂದ ಎಂಬ ಗುಟ್ಟು ಬಿಟ್ಟು ಕೊಟ್ಟಿಲ್ಲ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...