ಬೆಂಗಳೂರು: ಬೆಂಗಳೂರಿನಲ್ಲಿ ಅಳವಡಿಸಲಾಗಿದ್ದ ಟಿಪ್ಪು ಸುಲ್ತಾನ್ ಬ್ಯಾನರ್ ಗಳನ್ನು ಹರಿದುಹಾಕಿ ಆಕ್ರೋಶ ವ್ಯಕ್ತಪಡಿಸಿದ್ದ ಹಿಂದೂ ಪರ ಸಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ವಿರುದ್ಧ ಎಫ್ಐಆರ್ ದಾಖಲಾಗಿತ್ತು.
ಕೆ.ಆರ್.ವೃತ್ತದಲ್ಲಿ ಹಾಕಲಾಗಿದ್ದ ಟಿಪ್ಪು ಬ್ಯಾನರ್ ನ್ನು ಪುನೀತ್ ಕೆರೆಹಳ್ಳಿ ಹರಿದು ಹಾಕಿದ್ದರು. ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿಯೂ ವಿಡಿಯೋ ಹರಿಬಿಟ್ಟಿದ್ದರು ಎನ್ನಲಾಗಿದೆ. ಪುನೀತ್ ಕೆರೆಹಳ್ಳಿ ವಿರುದ್ಧ ಕಾಂಗ್ರೆಸ್ ಮುಖಂಡ ಮಂಜುನಾಥ್ ಹಲಸೂರು ಗೇಟ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಇದೀಗ ಪ್ರಕರಣ ಸಂಬಂಧ ಹಲಸೂರು ಗೇಟ್ ಠಾಣೆ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗದಲ್ಲಿ ನಡೆದಿದ್ದ ಸಾವರ್ಕರ್ ಭಾವಚಿತ್ರ ವಿವಾದಕ್ಕೆ ಪ್ರತಿಯಾಗಿ ಟಿಪ್ಪು ಸುಲ್ತಾನ್ ಭಾವಚಿತ್ರ ಹರಿದು ಆಕ್ರೋಶ ವ್ಯಕ್ತಪಡಿಸಿದ್ದಾಗಿ ಪುನೀತ್ ಹಾಗೂ ಸ್ನೇಹಿತರು ಹೇಳಿದ್ದಾರೆ ಎನ್ನಲಾಗಿದೆ.