alex Certify BIG NEWS: ಡಂಬಲ್ಸ್ ನಿಂದ ಹೊಡೆದು ಪತ್ನಿಯನ್ನು ಕೊಂದ ಪತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಂಬಲ್ಸ್ ನಿಂದ ಹೊಡೆದು ಪತ್ನಿಯನ್ನು ಕೊಂದ ಪತಿ

ಬೆಂಗಳೂರು: ಪತಿ ಮಹಾಶಯನೊಬ್ಬ ಡಂಬಲ್ಸ್ ನಿಂದ ಪತ್ನಿಯ ತಲೆಗೆ ಹೊಡೆದು ಹತ್ಯೆಗೈದಿರುವ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದಿದೆ.

ಲಿದಿಯಾ (44) ಮೃತ ಮಹಿಳೆ. ಪತಿ ಮೊರಿಸ್ ಪತ್ನಿ ಲಿದಿಯಾ ತಲೆಗೆ ಡಂಬಲ್ಸ್ ನಿಂದ ಮನಬಂದಂತೆ ಹೊಡೆದು ಸಾಯಿಸಿದ್ದಾನೆ. 18 ವರ್ಷಗಳ ಹಿಂದೆ ವಿವಾಹವಾಗಿದ್ದ ಲಿದಿಯಾ ಹಾಗೂ ಮೊರಿಸ್ ಗೆ ಮೂವರು ಮಕ್ಕಳಿದ್ದಾರೆ. ಆದರೆ ಪತ್ನಿ ಮೇಲಿನ ಅನುಮಾನಕ್ಕೆ ಪಾಪಿ ಪತಿ ಡಂಬಲ್ಸ್ ನಿಂದ ಹೊಡೆದು ಕೊಂದಿದ್ದಾನೆ ಎನ್ನಲಾಗಿದೆ.

ಸ್ಥಳಕ್ಕೆ ರಾಮಮೂರ್ತಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಆರೋಪಿ ಪತಿ ಮೊರಿಸ್ ನನ್ನು ಬಂಧಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...