ಬೆಳಗಾವಿ: ಬೆಳಗಾವಿ ಜಿಲ್ಲೆಯ ಸುಳೇಭಾವಿ ಗ್ರಾಮದಲ್ಲಿ ನಡೆದಿದ್ದ ಡಬಲ್ ಮರ್ಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪ ಆರೋಪದಲ್ಲಿ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ.
ಮಾರಿಹಾಳ ಠಾಣೆಯ ಹೆಡ್ ಕಾನ್ಸ್ ಟೇಬಲ್ ಬಿ.ಎಸ್. ಬಳಗಣ್ಣವರ್ ಹಾಗೂ ಪೊಲೀಸ್ ಸಿಬ್ಬಂದಿ ಆರ್.ಎಸ್. ತಳೇವಾಡೆ ಅವರನ್ನು ಅಮಾನತುಗೊಳಿಸಿ ಬೆಳಗಾವಿ ಪೊಲೀಸ್ ಆಯುಕ್ತ ಡಾ. ಬೋರಲಿಂಗಯ್ಯ ಆದೇಶ ಹೊರಡಿಸಿದ್ದಾರೆ.
ಅ.6ರಂದು ಸುಳೇಭಾವಿ ಗ್ರಾಮದಲ್ಲಿ ರಾತ್ರಿ ಎರಡು ಗುಂಪುಗಳ ನಡುವೆ ಗಲಾಟೆ ನಡೆದು, ಮಹೇಶ್ ಹಾಗೂ ಪ್ರಕಾಶ್ ಎಂಬುವವರ ಹತ್ಯೆ ನಡೆದಿತ್ತು. ಗ್ಯಾಂಗ್ ವಾರ್ ಬಗ್ಗೆ ಪೊಲೀಸರಿಗೆ ಮಾಹಿತಿ ಇದ್ದರೂ ಹಿರಿಯ ಅಧಿಕಾರಿಗಳ ಗಮನಕ್ಕೆ ತರದೇ ನಿರ್ಲಕ್ಷ ವಹಿಸಿದ್ದ ಹಿನ್ನೆಲೆಯಲ್ಲಿ ಇದೀಗ ಇಬ್ಬರು ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ.