ಬೆಂಗಳೂರು: ರಾಜ್ಯದ ಡಯಾಲಿಸಿಸ್ ಕೇಂದ್ರಗಳಲ್ಲಿ ಅವ್ಯವಸ್ಥೆ ಇದೆ. ಹಾಗಾಗಿ ಡಯಾಲಿಸಿಸ್ ಟೆಂಡರ್ ರದ್ದುಪಡಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ಮೊದಲು ಅಧಿಕಾರಿಗಳು ಹಾಗೂ ವೈದ್ಯರ ಕಾರ್ಯನಿರ್ವಹಣೆ ಸರಿಪಡಿಸಬೇಕಿದೆ. ಸಾಮಾನ್ಯ ಜನರಿಗೂ ಗುಣಮಟ್ಟದ ಚಿಕಿತ್ಸೆ ಕೊಡಬೇಕು ಎಂದು ಹೇಳಿದರು.
ಡಯಾಲಿಸಿಸ್ ಕೇಂದ್ರಗಳಲ್ಲಿ ಅವ್ಯವಸ್ಥೆ ಹೆಚ್ಚಿದೆ. ಅವುಗಳನ್ನು ಸರಿಪಡಿಸಬೇಕಿದೆ. ಆದ್ದರಿಂದ ಡಯಾಲಿಸಿಸ್ ಟೆಂಡರ್ ಅನ್ನೂ ರದ್ದು ಪಡಿಸಲಾಗಿದೆ ಎಂದರು.