ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಡೆತನದ ನ್ಯಾಷನಲ್ ಹಿಲ್ ವ್ಯೂವ್ ಶಾಲೆಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಅಚ್ಚರಿ ತಿರುವು ಸಿಕ್ಕಿದ್ದು, ಬಾಂಬ್ ಬೆದರಿಕೆಯೊಡ್ದಿದ್ದು ಓರ್ವ ವಿದ್ಯಾರ್ಥಿ ಎಂಬುದು ತಿಳಿದುಬಂದಿದೆ.
ನ್ಯಾಷನಲ್ ಹಿಲ್ ವ್ಯೂವ್ ಶಾಲೆಗೆ ಬಾಂಬ್ ಬೆದರಿಕೆಯೊಡ್ಡಿದ್ದು, ಅದೇ ಶಾಲೆಯ 10ನೇ ತರಗತಿ ವಿದ್ಯಾರ್ಥಿ. ಅದು ಕೂಡ ನಟ ಹುಚ್ಚ ವೆಂಕಟ್ ಹೆಸರಲ್ಲಿ ಇಮೇಲ್ ಮಾಡಿ ಈ ಕೃತ್ಯವೆಸಗಿದ್ದಾನೆ.
ಜುಲೈ 21ರಿಂದ 10ನೇ ತರಗತಿ ಪರೀಕ್ಷೆ ನಡೆಸಲು ಶಾಲೆಯಲ್ಲಿ ಉದ್ದೇಶಿಸಲಾಗಿತ್ತು. ಪರೀಕ್ಷೆ ಮುಂದೂಡಲು ಪ್ಲಾನ್ ಮಾಡಿದ್ದ ವಿದ್ಯಾರ್ಥಿ ಶಾಲೆಯಲ್ಲಿ ಬಾಂಬ್ ಇಡಲಾಗಿದೆ ಎಂದು ಇಮೇಲ್ ಮೂಲಕ ಬೆದರಿಕೆ ಹಾಕಿದ್ದಾನೆ.
ವಿದ್ಯಾರ್ಥಿಯನ್ನು ವಶಕ್ಕೆ ಪಡೆದಿರುವ ಆರ್.ಆರ್.ನಗರ ಪೊಲೀಸರು ಬಾಲ ಅಪರಾಧಿಗಳ ಪುನಶ್ಚೇತನ ಕೇಂದ್ರಕ್ಕೆ ಕಳುಹಿಸಿದ್ದಾರೆ.