alex Certify BIG NEWS: ಡಿಕೆಶಿ ಒಡೆತನದ ಶಾಲೆಗೆ ಬಾಂಬ್ ಬೆದರಿಕೆ; ಪ್ರಕರಣಕ್ಕೆ ಬಿಗ್ ಟ್ವಿಸ್ಟ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿಕೆಶಿ ಒಡೆತನದ ಶಾಲೆಗೆ ಬಾಂಬ್ ಬೆದರಿಕೆ; ಪ್ರಕರಣಕ್ಕೆ ಬಿಗ್ ಟ್ವಿಸ್ಟ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಒಡೆತನದ ನ್ಯಾಷನಲ್ ಹಿಲ್ ವ್ಯೂವ್ ಶಾಲೆಗೆ ಬಾಂಬ್ ಬೆದರಿಕೆ ಪ್ರಕರಣಕ್ಕೆ ಅಚ್ಚರಿ ತಿರುವು ಸಿಕ್ಕಿದ್ದು, ಬಾಂಬ್ ಬೆದರಿಕೆಯೊಡ್ದಿದ್ದು ಓರ್ವ ವಿದ್ಯಾರ್ಥಿ ಎಂಬುದು ತಿಳಿದುಬಂದಿದೆ.

ನ್ಯಾಷನಲ್ ಹಿಲ್ ವ್ಯೂವ್ ಶಾಲೆಗೆ ಬಾಂಬ್ ಬೆದರಿಕೆಯೊಡ್ಡಿದ್ದು, ಅದೇ ಶಾಲೆಯ 10ನೇ ತರಗತಿ ವಿದ್ಯಾರ್ಥಿ. ಅದು ಕೂಡ ನಟ ಹುಚ್ಚ ವೆಂಕಟ್ ಹೆಸರಲ್ಲಿ ಇಮೇಲ್ ಮಾಡಿ ಈ ಕೃತ್ಯವೆಸಗಿದ್ದಾನೆ.

ಜುಲೈ 21ರಿಂದ 10ನೇ ತರಗತಿ ಪರೀಕ್ಷೆ ನಡೆಸಲು ಶಾಲೆಯಲ್ಲಿ ಉದ್ದೇಶಿಸಲಾಗಿತ್ತು. ಪರೀಕ್ಷೆ ಮುಂದೂಡಲು ಪ್ಲಾನ್ ಮಾಡಿದ್ದ ವಿದ್ಯಾರ್ಥಿ ಶಾಲೆಯಲ್ಲಿ ಬಾಂಬ್ ಇಡಲಾಗಿದೆ ಎಂದು ಇಮೇಲ್ ಮೂಲಕ ಬೆದರಿಕೆ ಹಾಕಿದ್ದಾನೆ.

ವಿದ್ಯಾರ್ಥಿಯನ್ನು ವಶಕ್ಕೆ ಪಡೆದಿರುವ ಆರ್.ಆರ್.ನಗರ ಪೊಲೀಸರು ಬಾಲ ಅಪರಾಧಿಗಳ ಪುನಶ್ಚೇತನ ಕೇಂದ್ರಕ್ಕೆ ಕಳುಹಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...