ಬೆಂಗಳೂರು: ಕಾಂಗ್ರೆಸ್ ನಲ್ಲಿ ಸಿಎಂ ರೇಸ್ ನಲ್ಲಿ ಹಲವರು ಸಮರ್ಥರಿದ್ದಾರೆ. ನಾನೂ ಕೂಡ ಸಿಎಂ ಹುದ್ದೆ ಆಕಾಂಕ್ಷಿ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಂ.ಬಿ.ಪಾಟೀಲ್, ಕಾಂಗ್ರೆಸ್ ನ ಸಿಎಂ ಹುದ್ದೆ ಆಕಾಂಕ್ಷಿಗಳ ಪಟ್ಟಿ ಹೇಳಿದ್ದಾರೆ. ಸಿಎಂ ರೇಸ್ ನಲ್ಲಿ ಎರಡು ಸಾಲುಗಳಿವೆ ಸಿಎಂ ಹುದ್ದೆಯ ಮೊದಲ ಸಾಲಿನಲ್ಲಿ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಆರ್.ವಿ.ದೇಶಪಾಂಡೆ ಇದ್ದಾರೆ.
ಎರಡನೇ ಸಾಲಿನಲ್ಲಿ ನಾನು, ಡಿ.ಕೆ.ಶಿವಕುಮಾರ್, ಹೆಚ್.ಕೆ.ಪಾಟೀಲ್, ಜಿ.ಪರಮೇಶ್ವರ್, ದಿನೇಶ್ ಗುಂಡೂರಾವ್, ರಾಮಲಿಂಗಾರೆಡ್ಡಿ ಇದ್ದಾರೆ. ಮೊದಲು ಕಾಂಗ್ರೆಸ್ ಬಹುಮತ ಪಡೆದು ಅಧಿಕಾರಕ್ಕೆ ಬರಬೇಕು ಆನಂತರದಲ್ಲಿ ಸಿಎಂ ಯಾರಾಗಬೇಕು ಎಂಬುದನ್ನು ಹೈಕಮಾಂಡ್ ಆಯ್ಕೆ ಮಾಡುತ್ತದೆ ಎಂದರು.