ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್ ಜಾರಿ ನಿರ್ದೇಶನಾಲಯಕ್ಕೆ ನೋಟೀಸ್ ಜಾರಿ ಮಾಡಿದೆ.
ತನ್ನ ವಿರುದ್ಧದ ಪ್ರಕರಣದ ತನಿಖೆಯನ್ನು ರದ್ದುಗೊಳಿಸುವಂತೆ ಡಿ.ಕೆ.ಶಿವಕುಮಾರ್, ದೆಹಲಿ ಹೈಕೋರ್ಟ್ ಗೆ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ದೆಹಲಿ ಹೈಕೋರ್ಟ್ ಇಡಿಗೆ ನೋಟೀಸ್ ಜಾರಿ ಮಾಡಿದೆ.
ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಹಿಂದೆ ಇಡಿ ಮುಂದೆ ವಿಚಾರಣೆಗೆ ಹಾಜರಾಗುವುದರಿಂದ ಡಿ.ಕೆ.ಶಿವಕುಮಾರ್ ವಿನಾಯಿತಿ ಕೇಳಿದ್ದರು. ಆದರೆ ಡಿಕೆಶಿ ಮನವಿಯನ್ನು ಇಡಿ ತಿರಸ್ಕರಿಸಿತ್ತು. ಈ ಹಿನ್ನೆಲೆಯಲ್ಲಿ ಅವರು ಇಡಿ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಇದೀಗ ಇದೇ ಪ್ರಕರಣ ಸಂಬಂಧ ದೆಹಲಿ ಹೈಕೋರ್ಟ್ ಇಡಿಗೆ ನೋಟಿಸ್ ನೀಡಿದೆ ಎಂದು ತಿಳಿದುಬಂದಿದೆ.