alex Certify BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆ ಬಹಿಷ್ಕರಿಸಿ ಹೊರ ನಡೆದ ಬಿಜೆಪಿ ಶಾಸಕರು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆ ಬಹಿಷ್ಕರಿಸಿ ಹೊರ ನಡೆದ ಬಿಜೆಪಿ ಶಾಸಕರು

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ವಿಚಾರವಾಗಿ ಚರ್ಚಿಸಲು ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸಭೆ ಕರೆದಿದ್ದು, ಆದರೆ ಡಿಸಿಎಂ ಸಭೆಗೆ ಬರಲು ತಡವಾದ ಕಾರಣಕ್ಕೆ ಬಿಜೆಪಿ ಶಾಸಕರು ಸಭೆಯನ್ನೇ ಬಹಿಷ್ಕರಿಸಿ ನಡೆದ ಘಟನೆ ನಡೆದಿದೆ.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ 11 ಗಂಟೆಗೆ ಡಿಸಿಎಂ ಶಾಸಕರ ಸಭೆ ನಿಗದಿ ಪಡಿಸಿದ್ದರು. ಸಭೆ ಕರೆದು 1 ಗಂಟೆ ಕಳೆದರೂ ಡಿಸಿಎಂ ಸಮಯಕ್ಕೆ ಸರಿಯಾಗಿ ಸಭೆಗೆ ಬಾರದ ಹಿನ್ನೆಲೆಯಲ್ಲಿ ಅಸಮಾಧಾನಗೊಂಡ ಬಿಜೆಪಿ ಶಾಸಕರು ಸಭೆ ಬಹಿಷ್ಕರಿಸಿದ್ದಾರೆ.

ಬಿಜೆಪಿ ಶಾಸಕರಾದ ಅಶ್ವತ್ಥನಾರಾಯಣ, ಎಸ್.ಟಿ.ಸೋಮಶೇಖರ, ಮುನಿರತ್ನ, ರವಿ ಸುಬ್ರಹ್ಮಣ್ಯ ಸೇರಿದಂತೆ ಹಲವು ಶಾಸಕರು ಸಭೆಯಿಂದ ಹೊರ ನಡೆದಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...