ಬೆಳಗಾವಿ: ಜಿಲ್ಲಾಧಿಕಾರಿ ಕಚೇರಿ ಮುಂದೆಯೇ ಮಹಿಳೆಯೊಬ್ಬರು ತನ್ನ ಮೂವರು ಮಕ್ಕಳಿಗೆ ವಿಷವುಣಿಸಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಸರಸ್ವತಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆ. ಜಿಲ್ಲಾಧಿಕಾರಿ ಕಚೇರಿಗೆ ಬಂದ ಮಹಿಳೆ ಕಚೇರಿ ಮುಂದೆಯೇ ಮೂವರು ಮಕ್ಕಳಿಗೆ ವಿಷವುಣಿಸಿ ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.
ಪತಿ ಮಾಡಿದ ಸಾಲಕ್ಕೆ ಸಾಗಾರರು ನೀಡುತ್ತಿದ್ದ ಕಾಟದಿಂದ ಬೇಸತ್ತು ಮಹಿಳೆ ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ.