BIG NEWS: ಡಿ.ಕೆ.ಶಿವಕುಮಾರ್ ಕರೆ ಮಾಡಿ ‘ಸಿಡಿ’ ಬ್ಲಾಕ್ ಮೇಲ್ ಮಾಡುತ್ತಿದ್ದಾರೆ; ರಮೇಶ್ ಜಾರಕಿಹೊಳಿ ಗಂಭೀರ ಆರೋಪ

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.‌ ಶಿವಕುಮಾರ್ ವಿರುದ್ಧ ಮತ್ತೆ ಕಿಡಿ ಕಾರಿರುವ ಮಾಜಿ ಸಚಿವ ರಮೇಶ್ ಜಾರಕಿಹೊಳಿ, ಡಿ.ಕೆ. ಶಿವಕುಮಾರ್ ನನಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಚುನಾವಣೆಗೆ ಮೊದಲು ಮಧ್ಯರಾತ್ರಿ 12 ಗಂಟೆಗೆ ಕರೆ ಮಾಡಿ ಸಿಡಿ ಬಿಡುಗಡೆ ಮಾಡುವುದಾಗಿ ಡಿ.ಕೆ. ಶಿವಕುಮಾರ್ ಬ್ಲ್ಯಾಕ್ ಮೇಲ್ ಮಾಡಿದ್ದಾರೆ. ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಬೆಂಬಲಿಸದಂತೆ ತಾಕೀತು ಮಾಡಿದ್ದಾರೆ. ಲಕ್ಷ್ಮಿ ಹೆಬ್ಬಾಳ್ಕರ್ ವಿರುದ್ಧ ಕೆಲಸ ಮಾಡದಂತೆ ಹೇಳಿದ್ದಾರೆ ಎಂದು ಹೇಳಿದರು.

ಡಿ.ಕೆ. ಶಿವಕುಮಾರ್ ಬೆದರಿಕೆಗೆ ಹೆದರುವ ಪ್ರಶ್ನೆ ಇಲ್ಲ, ಸಿಡಿ ಬಿಡುಗಡೆ ಮಾಡು ನಾನೂ ಗಟ್ಟಿಯಾಗಿದ್ದೇನೆ ಎಂದಿದ್ದೇನೆ. ಬೆಳಗಾವಿ ಗ್ರಾಮೀಣ ಕ್ಷೇತ್ರದಿಂದ ಹಿಂದೆ ಸರಿಯುವ ಪ್ರಶ್ನೆ ಇಲ್ಲ. ಬೇಕಾದ್ದು ಆಗಲಿ. ಬಿಜೆಪಿ ನನ್ನ ಮೇಲೆ ವಿಶ್ವಾಸ ಇಟ್ಟಿದೆ. ಸಿಡಿ ಕೇಸ್ ನ್ನು ತಕ್ಷಣ ಸಿಬಿಐ ಗೆ ಒಪ್ಪಿಸಬೇಕು ಎಂದು ಹೇಳಿದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read