ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಜಾರಿ ನಿರ್ದೇಶನಾಲಯ(ಇಡಿ) ಮತ್ತೆ ಸಮನ್ಸ್ ಜಾರಿಗೊಳಿಸಿದ್ದು, ಈ ಬಗ್ಗೆ ಡಿ.ಕೆ.ಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾರತ್ ಜೋಡೋ ಯಾತ್ರೆ ಹಾಗೂ ವಿಧಾನಸಭಾ ಅಧಿವೇಶನ ನಡೆಯುತ್ತಿರುವ ಮಧ್ಯೆಯೇ ಮತ್ತೊಮ್ಮೆ ಇಡಿ ನನಗೆ ಸಮನ್ಸ್ ನೀಡಿದೆ. ನಾನು ಸಹಕರಿಸಲು ಸಿದ್ಧ ಆದರೆ ಈ ಸಮನ್ಸ್ ನೀಡಿರುವ ಸಮಯ ಹಾಗೂ ಮೇಲಿಂದ ಮೇಲೆ ನೀಡುತ್ತಿರುವ ಕಿರುಕುಳದಿಂದಾಗಿ ನನ್ನ ಸಾಂವಿಧಾನಿಕ ಮತ್ತು ರಾಜಕೀಯ ಕರ್ತವ್ಯಗಳನ್ನು ನಿರ್ವಹಿಸಲು ತೊಂದರೆಯಾಗುತ್ತಿದೆ ಎಂದು ಕಿಡಿಕಾರಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಡಿ.ಕೆ.ಶಿವಕುಮಾರ್ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.