ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರಿಗೆ ಮತ್ತೊಂದು ರಿಲೀಫ್ ಸಿಕ್ಕಿದೆ. ವಿದೇಶ ಪ್ರವಾಸಕ್ಕೆ ತೆರಳಲು ನ್ಯಾಯಾಲಯ ಅನುಮತಿ ನೀಡಿದೆ.
ದುಬೈಗೆ ತೆರಳಲು ಅನುಮತಿ ಕೋರಿ ಡಿ.ಕೆ.ಶಿವಕುಮಾರ್ ಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ದೆಹಲಿ ರೋಸ್ ಅವೆನ್ಯೂ ಕೋರ್ಟ್ ದುಬೈಗೆ ತೆರಳಲು ಅನುಮತಿ ನೀಡಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರಗಿರುವ ಡಿ.ಕೆ.ಶಿವಕುಮಾರ್ ಅವರಿಗೆ ವಿದೇಶ ಪ್ರವಾಸಕ್ಕೆ ಕೋರ್ಟ್ ಅನುಮತಿ ನೀಡಿರಲಿಲ್ಲ. ಇದೀಗ ವಿದೇಶಕ್ಕೆ ತೆರಳು ಕೋರ್ಟ್ ಅನುಮತಿ ನೀಡಿದೆ.