ಬೆಂಗಳೂರು: ಚನ್ನಗಿರಿ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ್ ಶಿವಗಂಗಾ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಇದೇ ವೇಳೆ ಅಧಿವೇಶನದ ಮೊದಲ ದಿನವೇ ಹಂಗಾಮಿ ಸ್ಪೀಕರ್ ಆರ್.ವಿ. ದೇಶಪಾಂಡೆ ಶಾಸಕರಿಗೆ ಖಡಕ್ ಸೂಚನೆ ನೀಡಿದ ಘಟನೆ ನಡೆದಿದೆ.
ದೇವರು ಮತ್ತು ಸಂವಿಧಾನದ ಹೆಸರು ಹೊರತುಪಡಿಸಿ ಬೇರೆ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸದಂತೆ ಸದಸ್ಯರಿಗೆ ಹಂಗಾಮಿ ಸ್ಪೀಕರ್ ಸೂಚಿಸಿದ್ದಾರೆ.