ಬೆಂಗಳೂರು: ತಮ್ಮ ವಿರುದ್ಧ ಐಪಿಎಸ್ ಅಧಿಕಾರಿ ಡಿ. ರೂಪಾ ಮಾಡಿರುವ ಸಾಲು ಸಾಲು ಆರೋಪಗಳಿಗೆ ಕಿಡಿ ಕಾರಿರುವ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ರೂಪಾ ಅವರು ವೈಯಕ್ತಿಕವಾಗಿ ನನ್ನ ತೇಜೋವಧೆ ಮಾಡಿದ್ದಾರೆ. ಇದನ್ನು ಸುಮ್ಮನೆ ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಭೇಟಿಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿರ ರೋಹಿಣಿ ಸಿಂಧೂರಿ, ವೈಯಕ್ತಿಕವಾಗಿ ತೇಜೋವಧೆ ಮಾಡೋದು ಸರಿಯಲ್ಲ, ಮೊದಲು ಸರ್ಕಾರದ ಗಮನಕ್ಕೆ ತರಬೇಕು. ಇದನ್ನು ನಾವು ಬಿಡುವುದಿಲ್ಲ ಎಲ್ಲಾ ರೀತಿಯ ಕ್ರಮಕ್ಕೆ ಸಿದ್ಧರಾಗಿದ್ದೇವೆ ಎಂದರು.
ಪ್ರೊಫೆಷನಲ್ ಆಗಿ ಮಾತನಾಡಲಿ, ಆದರೆ ಪರ್ಸನಲ್ ಆಗಿ ಬೇಡ. ಈ ರೀತಿ ವೈಯಕ್ತಿಕವಾಗಿ ತೇಜೋವಧೆ ಮಾಡಿರುವುದು ತಪ್ಪು ಕಾನೂನು ಮೂಲಕ ಕಠಿಣ ಕ್ರಮಕ್ಕೆ ಮುಂದಾಗುತ್ತೇವೆ. Get Well Soon ಎಂದು ಕೌಂಟರ್ ಕೊಟ್ಟಿದ್ದಾರೆ.