alex Certify BIG NEWS: ಡಿ. ರೂಪಾ ಆರೋಪಕ್ಕೆ ರೋಹಿಣಿ ಸಿಂಧೂರಿ ಖಡಕ್ ಉತ್ತರ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿ. ರೂಪಾ ಆರೋಪಕ್ಕೆ ರೋಹಿಣಿ ಸಿಂಧೂರಿ ಖಡಕ್ ಉತ್ತರ

ಬೆಂಗಳೂರು: ತಮ್ಮ ವಿರುದ್ಧ ಐಪಿಎಸ್ ಅಧಿಕಾರಿ ಡಿ. ರೂಪಾ ಮಾಡಿರುವ ಸಾಲು ಸಾಲು ಆರೋಪಗಳಿಗೆ ಕಿಡಿ ಕಾರಿರುವ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ರೂಪಾ ಅವರು ವೈಯಕ್ತಿಕವಾಗಿ ನನ್ನ ತೇಜೋವಧೆ ಮಾಡಿದ್ದಾರೆ. ಇದನ್ನು ಸುಮ್ಮನೆ ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಮುಖ್ಯ  ಕಾರ್ಯದರ್ಶಿ ವಂದಿತಾ ಶರ್ಮಾ ಭೇಟಿಗೂ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿರ ರೋಹಿಣಿ ಸಿಂಧೂರಿ, ವೈಯಕ್ತಿಕವಾಗಿ ತೇಜೋವಧೆ ಮಾಡೋದು ಸರಿಯಲ್ಲ, ಮೊದಲು ಸರ್ಕಾರದ ಗಮನಕ್ಕೆ ತರಬೇಕು. ಇದನ್ನು ನಾವು ಬಿಡುವುದಿಲ್ಲ ಎಲ್ಲಾ ರೀತಿಯ ಕ್ರಮಕ್ಕೆ ಸಿದ್ಧರಾಗಿದ್ದೇವೆ ಎಂದರು.

ಪ್ರೊಫೆಷನಲ್ ಆಗಿ ಮಾತನಾಡಲಿ, ಆದರೆ ಪರ್ಸನಲ್ ಆಗಿ ಬೇಡ. ಈ ರೀತಿ ವೈಯಕ್ತಿಕವಾಗಿ ತೇಜೋವಧೆ ಮಾಡಿರುವುದು ತಪ್ಪು ಕಾನೂನು ಮೂಲಕ ಕಠಿಣ ಕ್ರಮಕ್ಕೆ ಮುಂದಾಗುತ್ತೇವೆ. Get Well Soon ಎಂದು ಕೌಂಟರ್ ಕೊಟ್ಟಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...