ಬೆಂಗಳೂರು: ಐಪಿಎಸ್ ಅಧಿಕಾರಿ ಡಿ.ರೂಪಾ ಹಾಗೂ ಐ ಎ ಎಸ್ ಅಧಿಕಾರಿ ರೋಹಿಣಿ ಸಿಂಧೂರಿ ನಡುವಿನ ಸಂಘರ್ಷ, ಸರ್ಕಾರಕ್ಕೆ ಮುಜುಗರ ತಂದಿದ್ದು, ಇಬ್ಬರು ಅಧಿಕಾರಿಗಳಿಗೆ ನೋಟೀಸ್ ನೀಡಲು ಸಿಎಂ ಬಸವರಾಜ್ ಬೊಮ್ಮಾಯಿ ಸೂಚಿಸಿದ್ದಾರೆ.
ಇಬ್ಬರು ಅಧಿಕಾರಿಗಳ ವರ್ತನೆ ಸರ್ಕಾರಕ್ಕೆ ಮುಜುಗರ ತಂದಿದೆ. ಡಿ.ರೂಪಾ ಹಾಗೂ ರೋಹಿಣಿ ಸಿಂಧೂರಿಗೆ ನೋಟೀಸ್ ಜಾರಿ ಮಾಡುವಂತೆ ಮುಖ್ಯಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಸಿಎಂ ಬೊಮ್ಮಾಯಿ ಸೂಚಿಸಿದ್ದಾರೆ.
ಅಧಿಕಾರಿಗಳು ಬೇಜವಾಬ್ದಾರಿಯಿಂದ ವರ್ತಿಸುವುದನ್ನು ಸಹಿಸುವುದಿಲ್ಲ. ಈ ಸಂಬಂಧ ನೋಟೀಸ್ ಕೊಡುವಂತೆ ಸಿಎಸ್ ಗೆ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.