alex Certify BIG NEWS: ಡಿ.16 ರ ವರೆಗೆ ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ; ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡಿ.16 ರ ವರೆಗೆ ರಾಜ್ಯದಲ್ಲಿ ಮುಂದುವರಿಯಲಿದೆ ಮಳೆ; ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಮೌಂಡೂಸ್ ಚಂಡಮಾರುತದ ಕಾರಣಕ್ಕೆ ಕಳೆದ ಕೆಲವು ದಿನಗಳಿಂದ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಚಂಡಮಾರುತ ಈಗ ತನ್ನ ವೇಗವನ್ನು ಕಳೆದುಕೊಂಡಿದ್ದರೂ ಸಹ ಡಿಸೆಂಬರ್ 16ರವರೆಗೆ ರಾಜ್ಯದಲ್ಲಿ ಸಾಧಾರಣದಿಂದ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೆ 12 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಎಲ್ಲೋ ಅಲರ್ಟ್ ಘೋಷಿಸಿದೆ.

ಶಿವಮೊಗ್ಗ, ಚಾಮರಾಜನಗರ ಹಾಗೂ ಕೊಡಗು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಮಳೆಯಿಂದಾಗಬಹುದಾದ ಅನಾಹುತಗಳ ಕುರಿತು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಇದರ ಜೊತೆಗೆ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಹಾಗೂ ಇತರೆ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಹಾವೇರಿ, ಗದಗ, ಬಳ್ಳಾರಿ ಜಿಲ್ಲೆಗಳಲ್ಲಿಯೂ ಎಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಸುತ್ತಮುತ್ತಲ ಜಿಲ್ಲೆಗಳ ವ್ಯಾಪ್ತಿಯಲ್ಲೂ ಸಹ ಸಾಧಾರಣದಿಂದ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಇದರ ಮಧ್ಯೆ ರಾಜ್ಯದಲ್ಲಿ ಶೀತ ಗಾಳಿ ಜೊತೆಗೆ ಮಳೆಯೂ ಸುರಿಯುತ್ತಿರುವ ಕಾರಣ ಹಿರಿಯರು, ಮಕ್ಕಳು ಅನಾರೋಗ್ಯಕ್ಕೊಳಗಾಗಿದ್ದಾರೆ. ಇಂತಹ ಹವಾಮಾನ ಪರಿಸ್ಥಿತಿಯಲ್ಲಿ ಸಾರ್ವಜನಿಕರು ಆದಷ್ಟು ಬೆಚ್ಚಗಿನ ವಾತಾವರಣದಲ್ಲಿ ಇರುವುದು ಸೂಕ್ತ. ಜೊತೆಗೆ ಬಿಸಿ ನೀರು ಕುಡಿಯುವುದು ಆರೋಗ್ಯಕ್ಕೆ ಒಳ್ಳೆಯದು ಎಂದು ತಜ್ಞ ವೈದ್ಯರು ಸೂಚಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...