alex Certify BIG NEWS: ಡೆಂಗ್ಯೂ ಅಟ್ಟಹಾಸಕ್ಕೆ 6 ವರ್ಷದ ಬಾಲಕಿ ಬಲಿ; ರಾಯಚೂರು ಜಿಲ್ಲೆಯಲ್ಲಿ 1500 ಮಕ್ಕಳು ಆಸ್ಪತ್ರೆಗೆ ದಾಖಲು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡೆಂಗ್ಯೂ ಅಟ್ಟಹಾಸಕ್ಕೆ 6 ವರ್ಷದ ಬಾಲಕಿ ಬಲಿ; ರಾಯಚೂರು ಜಿಲ್ಲೆಯಲ್ಲಿ 1500 ಮಕ್ಕಳು ಆಸ್ಪತ್ರೆಗೆ ದಾಖಲು

ರಾಯಚೂರು: ರಾಯಚೂರಿನಲ್ಲಿ ಡೆಂಗ್ಯೂ ಅಟ್ಟಹಾಸಕ್ಕೆ 6 ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ. ಈ ಮೂಲಕ ಇದುವರೆಗೆ ಡೆಂಘಿಗೆ ಜಿಲ್ಲೆಯಲ್ಲಿ ಬಲಿಯಾದ ಮಕ್ಕಳ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

ಮೃತ ಬಾಲಕಿ ಸೋನು ಎಂದು ಗುರುತಿಸಲಾಗಿದೆ. ಸಿಂಧನೂರು ನಗರದ ಅಂಗನವಾಡಿ ಕಾರ್ಯಕರ್ತೆ ಅನಿತಾ ಎಂಬುವವರ ಮಗಳಾದ ಸೋನು ತೀವ್ರ ಜ್ವರದಿಂದ ಬಳಲುತ್ತಿದ್ದ ಹಿನ್ನೆಲೆಯಲ್ಲಿ ಕಳೆದ ಒಂದು ವಾರದ ಹಿಂದೆ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಾಲಕಿ ಸಾವನ್ನಪ್ಪಿದ್ದಾಳೆ.

ರಾಯಚೂರು ಜಿಲ್ಲೆಯಾದ್ಯಂತ ಮಕ್ಕಳಲ್ಲಿ ವೈರಲ್ ಫೀವರ್ ಹೆಚ್ಚುತ್ತಿದ್ದು, ಡೆಂಗ್ಯೂ ಪ್ರಕರಣಗಳು ಹೆಚ್ಚುತ್ತಿವೆ. ರಿಮ್ಸ್ ಆಸ್ಪತ್ರೆಯೊಂದರಲ್ಲೇ ಡೆಂಗ್ಯೂ ಪೀಡಿತ 30 ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದರೆ, ಜಿಲ್ಲೆಯಾದ್ಯಂತ ವಿವಿಧ ಆಸ್ಪತ್ರೆಗಳಲ್ಲಿ 1500 ಮಕ್ಕಳು ದಾಖಲಾಗಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...