ಬೆಂಗಳೂರು: ರಾಜ್ಯ ಸರ್ಕಾರದಲ್ಲಿ ವರ್ಗಾವಣೆ ದಂಧೆ ಯಾವ ರೀತಿ ನಡೆಯುತ್ತಿದೆ. ಸಾರಿಗೆ ಬಸ್ ನೌಕರ ವರ್ಗಾವಣೆಗೆ ಬೇಸತ್ತು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆದರೂ ಈವರೆಗೆ ಸರ್ಕಾರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಕೆ.ಎಸ್.ಆರ್.ಟಿ.ಸಿ ಬಸ್ ಚಾಲಕ ವರ್ಗಾವಣೆಗೆ ಬೇಸತ್ತು ಸಚಿವರ ವಿರುದ್ಧ ಆರೋಪ ಮಾಡಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಆತ್ಮಹತ್ಯೆ ಯತ್ನಕ್ಕೂ ಮುನ್ನ ಆತ ಡೆತ್ ನೋಟ್ ಬರೆದಿಟ್ಟಿದ್ದಾನೆ. ಡೆತ್ ನೋಟ್ ಬರೆದಿಟ್ಟರೂ ಸಂಬಂಧ ಪಟ್ಟವರ ವಿರುದ್ಧ ಇನ್ನೂ ಎಫ್ ಐ ಆರ್ ದಾಖಲಾಗಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇನ್ನೊಂದೆಡೆ ಕೆ.ಎಸ್.ಆರ್.ಟಿ.ಸಿ ನೌಕರರು ಬೆಳಿಗ್ಗೆಯಿಂದ ಪ್ರತಿಭಟನೆ ನಡೆಸಿದ್ದಾರೆ. ಮತ್ತೊಂದೆಡೆ ಜನರು ಬಸ್ ಗಳಿಲ್ಲದೇ ಪರದಾಡುತ್ತಿದ್ದಾರೆ. ಜನರಿಗೆ ಬಸ್ ಸಿಗದಂತಾಗಲು ಯಾರು ಕಾರಣ ? ಇಷ್ಟೆಲ್ಲ ಆಗುತ್ತಿದ್ದರೂ ಸರ್ಕಾರ ಸುಮ್ಮನೆ ಕುಳಿತಿದೆ. ಇದು ಸರ್ಕಾರ ಜನರಿಗೆ ಯಾವ ರೀತಿ ರಕ್ಷಣೆ ಕೊಡುತ್ತಿದೆ ಎಂಬುದಕ್ಕೆ ಸಾಕ್ಷಿ ಎಂದು ಕಿಡಿಕಾರಿದರು.