alex Certify BIG NEWS: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರನ ಸೂಪರ್ ವೈಸರ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾದ ಗುತ್ತಿಗೆದಾರನ ಸೂಪರ್ ವೈಸರ್

ಚಿಕ್ಕಮಗಳೂರು: ಗುತ್ತಿಗೆದಾರನ ಬಳಿ ಸೂಪರ್ ವೈಸರ್ ಆಗಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರು ಲಾಡ್ಜ್ ನಲ್ಲಿ ನಡೆದಿದೆ.

ಬೆಳಗಾವಿ ಮೂಲದ ಬಸವರಾಜ್ ಲಿಂಗಪ್ಪ (47) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೊಡ್ಡ ವಾಟರ್ ಟ್ಯಾಂಕ್ ಕಟ್ಟುವ ಗುತ್ತಿಗೆದಾರನ ಬಳಿ ಕಳೆದ ಹತ್ತು ದಿನಗಳಿಂದ ಬಸವರಾಜ್ ಲಿಂಗಪ್ಪ ಕಾರ್ಯನಿರ್ವಹಿಸುತ್ತಿದ್ದರು. 6 ವರ್ಷಗಳಿಂದ ಬೇರೆಯವರ ಬಳಿ ಕೆಲಸ ಮಾಡುತ್ತಿದ್ದ. ಆದರೆ 6 ವರ್ಷಗಳಿಂದ ತನಗೆ ಸಂಬಳ ನೀಡಿಲ್ಲ ಎಂದು ಆರೋಪಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಲಿಂಗಪ್ಪ ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿರುವುದು ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ಬಾಳೆಹೊನ್ನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...