ಬೆಂಗಳೂರು: ರಾಜ್ಯದಲ್ಲಿ ಡೆಲ್ಟಾ ಪ್ಲಸ್ ವೈರಸ್ ಪ್ರಕರಣ ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಗಡಿ ಜಿಲ್ಲೆಗಳಲ್ಲಿ ಹೆಚ್ಚು ಎಚ್ಚರಿಕೆ ವಹಿಸುವ ಅಗತ್ಯವಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ತಿಳಿಸಿದ್ದಾರೆ.
ಹಣ ಗಳಿಸುವ ಸುವರ್ಣಾವಕಾಶ ನೀಡ್ತಿದೆ ʼಅಮೆಜಾನ್ʼ
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್, ಮೈಸೂರು ಹಾಗೂ ಬೆಂಗಳೂರಿನಲ್ಲಿ ತಲಾ ಇಬ್ಬರಲ್ಲಿ ಡೆಲ್ಟಾ ಪ್ಲಸ್ ಮಾದರಿ ಸೋಂಕು ಅಧಿಕೃತವಾಗಿ ಪತ್ತೆಯಾಗಿದೆ. ಬೆಂಗಳೂರಿನಲ್ಲಿ ಸೋಂಕು ಪತ್ತೆಯಾದವರು ಹಿರಿಯ ನಾಗರಿಕರಾಗಿದ್ದಾರೆ. ಇಬ್ಬರ ಮೇಲೂ ತೀವ್ರ ನಿಗಾ ಇಡಲಾಗಿದೆ. ಪ್ರಾಥಮಿಕ ಸಂಪರ್ಕದಲ್ಲಿರುವವರನ್ನು ಪರೀಕ್ಷೆಗೆ ಒಳಪಡಿಸಲಾಗಿದೆ ಎಂದರು.
ಈ ರಾಜ್ಯಗಳಲ್ಲಿ ಮುಂದಿನ ವಾರ ನಾಲ್ಕು ದಿನ ʼಬಂದ್ʼ ಇರಲಿದೆ ಬ್ಯಾಂಕ್
ಕೇರಳದ ಗಡಿ ಭಾಗದ ಜಿಲ್ಲೆಗಳಲ್ಲಿ ಹೆಚ್ಚು ಎಚ್ಚರ ವಹಿಸಬೇಕು. ಕೇರಳದಲ್ಲಿ ಸೋಂಕಿತರ ಸಂಖ್ಯೆ ಹೆಚ್ಚಿದ್ದು, ಆತಂಕಕ್ಕೆ ಕಾರಣವಾಗಿದೆ. ಅಲ್ಲಿ ಶೇ.4-5ರಷ್ಟು ಕೇಸ್ ವರದಿಯಾಗುತ್ತಿವೆ. ಹೀಗಾಗಿ ಗಡಿ ಭಾಗದ ಜಿಲ್ಲೆಗಳು ಎಚ್ಚರಿಕೆ ವಹಿಸುವ ಬಗ್ಗೆ ಸೂಚಿಸಲಾಗಿದೆ ಎಂದು ಹೇಳಿದರು.