ಮಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಚಾರ್ಜ್ ಶೀಟ್ ಸಲ್ಲಿಕೆಯಾಗಿದ್ದು, ಅದರಲ್ಲಿ ಆಂಕರ್ ಅನುಶ್ರೀ ಹೆಸರು ಕೂಡ ಉಲ್ಲೇಖವಾಗಿದೆ. ಆದರೆ ಅನುಶ್ರೀ ವಿರುದ್ಧ ಪ್ರಕರಣ ದಾಖಲಾಗಿಲ್ಲ. ಈ ಬಗ್ಗೆ ಸ್ವತಃ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಮಾಹಿತಿ ನೀಡಿದ್ದಾರೆ.
ಡ್ರಗ್ಸ್ ಪ್ರಕರಣ ಸಂಬಂಧ ಈಗಾಗಲೇ ತನಿಖೆ ಪೂರ್ಣಗೊಂಡು ಅಂತಿಮ ವರದಿ ಸಲ್ಲಿಕೆಯಾಗಿದೆ. ನಾನು ಆಯುಕ್ತನಾಗಿ ಬರುವ ಮೊದಲೇ ತನಿಖೆ ಪೂರ್ಣಗೊಂಡಿತ್ತು. ಈ ಬಗ್ಗೆ ನಾನು ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದೇನೆ. ನ್ಯಾಯಾಲಯಕ್ಕೆ ಅಂತಿಮ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಆಂಕರ್ ಅನುಶ್ರೀ ವಿರುದ್ಧ ಸಾಕ್ಷಾಧಾರದ ಕೊರತೆಯಿಂದಾಗಿ ಪ್ರಕರಣ ದಾಖಲಾಗಿಲ್ಲ ಎಂದು ತಿಳಿಸಿದರು.
ಇಂದು ‘ಸೀಟಿಮಾರ್’ ಚಿತ್ರದ ಪ್ರೀ ರಿಲೀಸ್ ಇವೆಂಟ್
ಪ್ರಕರಣ ಸಂಬಂಧ ಮತ್ತೆ ಅನುಶ್ರೀ ವಿಚಾರಣೆ ಸಾಧ್ಯತೆ ಕಡಿಮೆ. ಅವರ ವಿರುದ್ಧದ ಸಾಕ್ಷಾಧಾರಗಳು ಇಲ್ಲದಿರುವುದರಿಂದ ಚಾರ್ಜ್ ಶೀಟ್ ಸಲ್ಲಿಸಲಾಗಿಲ್ಲ ಎಂದಿದ್ದಾರೆ.
ಇನ್ನು ಚಾರ್ಜ್ ಶೀಟ್ ನಲ್ಲಿರುವ ಹೇಳಿಕೆ ನನ್ನದಲ್ಲ ಎಂಬ ಆರೋಪಿ ಕಿಶೋರ್ ಶೆಟ್ಟಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪೊಲೀಸ್ ಆಯುಕ್ತರು, ಚಾರ್ಜ್ ಶೀಟ್ ನಲ್ಲಿನ ಅಂಶಗಳನ್ನು ಓದಿ ಹೇಳಿ ನಂತರ ವ್ಯಕ್ತಿ ಸಹಿ ಪಡೆಯಲಾಗುತ್ತದೆ. ಹೇಳಿಕೆ ಅವರದ್ದಲ್ಲ ಎನ್ನುವುದಾದರೆ ಕಿಶೋರ್ ಅಂದು ನ್ಯಾಯಾಲಯದಲ್ಲೇ ಹೇಳಬಹುದಿತ್ತು. ಈಗ ಹೇಳಿಕೆ ನನ್ನದಲ್ಲ ಎಂಬುದು ತಪ್ಪು ಎಂದಿದ್ದಾರೆ.