alex Certify BIG NEWS: ಡ್ರಗ್ಸ್ ಪಾರ್ಟಿ ಮೇಲೆ ದಾಳಿ; ನಟಿ ನಿಹಾರಿಕಾ ಕೊನಿಡೆಲಾ, ಗಾಯಕ ರಾಹುಲ್ ಸೇರಿ ಹಲವರು ಪೊಲೀಸ್ ವಶಕ್ಕೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡ್ರಗ್ಸ್ ಪಾರ್ಟಿ ಮೇಲೆ ದಾಳಿ; ನಟಿ ನಿಹಾರಿಕಾ ಕೊನಿಡೆಲಾ, ಗಾಯಕ ರಾಹುಲ್ ಸೇರಿ ಹಲವರು ಪೊಲೀಸ್ ವಶಕ್ಕೆ

ಹೈದರಾಬಾದ್: ಐಷಾರಾಮಿ ಪಬ್ ನಲ್ಲಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿ ಮೇಲೆ ದಾಳಿ ನಡೆಸಿದ ಪೊಲೀಸರು ಟಾಲಿವುಡ್ ನಟಿ ನಿಹಾರಿಕಾ ಕೊನಿಡೆಲಾ, ಸಿಂಗರ್ ರಾಹುಲ್ ಸಿಪ್ಲಿಗಂಜ್ ಸೇರಿದಂತೆ ಹಲವರನ್ನು ವಶಕ್ಕೆ ಪಡೆದಿದ್ದಾರೆ.

ಹೈದರಾಬಾದ್ ನ ಬಂಜಾರಾ ಹಿಲ್ಸ್ ನಲ್ಲಿರುವ ಐಷಾರಾಮಿ ಪಬ್ ಒಂದರ ಮೇಲೆ ತಡ ರಾತ್ರಿ 3 ಗಂಟೆಗೆ ದಾಳಿ ನಡೆಸಿದ ಪೊಲೀಸರು ಮಾದಕ ವಸ್ತುಗಳ ಸೇವನೆಯಲ್ಲಿ ತೊಡಗಿದ್ದ ಹಲವು ಸೆಲೆಬ್ರಿಟಿಗಳ ಮಕ್ಕಳನ್ನು ವಶಕ್ಕೆ ಪಡೆದಿದ್ದಾರೆ. ದಾಳಿ ವೇಳೆ ಬೃಹತ್ ಪ್ರಮಾಣದ ಕೊಕೆನ್ ವಶಕ್ಕೆ ಪಡೆಯಲಾಗಿದೆ ಎನ್ನಲಾಗಿದೆ.

ಪಾರ್ಟಿಯಲ್ಲಿ ಭಾಗಿಯಾಗಿದ್ದ ಟಾಲಿವುಡ್ ನಟ ಚಿರಂಜೀವಿ ಸಹೋದರ ನಾಗಬಾಬು ಅವರ ಪುತ್ರಿ ನಟಿ ನಿಹಾರಿಕಾ ಕೊನಿಡೆಲಾ, ಗಾಯಕ ರಾಹುಲ್, ಓರ್ವ ರಾಜಕಾರಣಿ ಸೇರಿದಂತೆ ಹಲವರನ್ನು ಬಂಜಾರಾ ಹಿಲ್ಸ್ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಲ ಗಂಟೆಗಳ ಕಾಲ ವಿಚಾರಣೆ ನಡೆಸಿದ ಪೊಲೀಸರು ನಿಹಾರಿಕಾ ಹಾಗೂ ರಾಹುಲ್ ಅವರನ್ನು ಬಿಟ್ಟು ಕಳುಹಿಸಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಮಾತನಾಡಿರುವ ನಟ ನಾಗಬಾಬು, ನಿಹಾರಿಕಾ ಪಬ್ ಗೆ ಹೋಗಿದ್ದು ನಿಜ. ಆದರೆ ಆಕೆ ಪಾರ್ಟಿಯಲ್ಲಿ ಭಾಗಿಯಾಗಿರಲಿಲ್ಲ, ಅಲ್ಲದೇ ಪೊಲೀಸ್ ದಾಳಿ ವೇಳೆ ಆಕೆ ಬಳಿ ಯಾವುದೇ ಮಾದಕವಸ್ತು ಲಭ್ಯವಾಗಿಲ್ಲ ಎಂದು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...