ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಸಿಬಿ ಪೊಲೀಸರು ಇದೀಗ ಚಾರ್ಜ್ ಶೀಟ್ ಸಲ್ಲಿಸಿದ್ದು, ಚಾರ್ಜ್ ಶೀಟ್ ನಲ್ಲಿ ಆಂಕರ್ ಅನುಶ್ರೀ ಹೆಸರು ಉಲ್ಲೇಖಿಸಿದ್ದಾರೆ.
ಡ್ರಗ್ಸ್ ಪ್ರಕರಣದಲ್ಲಿ ಬಂಧಿತನಾಗಿರುವ ಎ 2 ಆರೋಪಿ ಡಾನ್ಸರ್ ಕಿಶೋರ್ ಶೆಟ್ಟಿ ನೀಡಿರುವ ಹೇಳಿಕೆ ಬೆನ್ನಲ್ಲೇ ಅನುಶ್ರೀ ಹೆಸರನ್ನು ಚಾರ್ಜ್ ಶೀಟ್ ನಲ್ಲಿ ದಾಖಲಿಸಲಾಗಿದೆ.
ಪಾಕಿಸ್ತಾನದಲ್ಲಿದ್ದಾನೆ ‘ಮನಿ ಹೀಸ್ಟ್’ ಪ್ರೊಫೆಸರ್ ತದ್ರೂಪಿ
ಆಂಕರ್ ಅನುಶ್ರೀ ಡ್ರಗ್ಸ್ ಸೇವನೆ ಜೊತೆಗೆ ಸಾಗಾಟ ಕೂಡ ಮಾಡುತ್ತಿದ್ದರು. ಅನುಶ್ರೀಗೆ ಡ್ರಗ್ಸ್ ಪೆಡ್ಲರ್ ಗಳ ಪರಿಚಯ ಚೆನ್ನಾಗಿದೆ ಎಂದು ಕಿಶೋರ್ ಹೇಳಿಕೆ ನೀಡಿದ್ದಾನೆ. ಅಲ್ಲದೇ ಅನುಶ್ರೀ, ಕಿಶೋರ್ ಶೆಟ್ಟಿ ಹಾಗೂ ತರುಣ್ ರೂಮಿಗೆ ಡ್ರಗ್ಸ್ ತರುತ್ತಿದ್ದರು. ಇಬ್ಬರ ಜೊತೆಯಲ್ಲೂ ಸಾಕಷ್ಟು ಬಾರಿ ಅನುಶ್ರೀ ಡ್ರಗ್ಸ್ ಸೇವನೆ ಮಾಡಿರುವುದಾಗಿ ದೋಷಾರೋಪ ಪಟ್ಟಿಯಲ್ಲಿ ದಾಖಲಿಸಲಾಗಿದೆ.