alex Certify BIG NEWS: ಡ್ರಗ್ಸ್ ವಿರುದ್ಧ ವಾರ್ ಡಿಕ್ಲೇರ್ ಮಾಡಲಾಗಿದೆ; ಬಿಟ್ ಕಾಯಿನ್ ಕೇಸ್ ತನಿಖೆಯಲ್ಲೂ ಗೊಂದಲದ ಮಾತಿಲ್ಲ; ವಿಪಕ್ಷಗಳಿಗೆ ಖಡಕ್ ಉತ್ತರ ನೀಡಿದ ಸಿಎಂ ಬೊಮ್ಮಾಯಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ಡ್ರಗ್ಸ್ ವಿರುದ್ಧ ವಾರ್ ಡಿಕ್ಲೇರ್ ಮಾಡಲಾಗಿದೆ; ಬಿಟ್ ಕಾಯಿನ್ ಕೇಸ್ ತನಿಖೆಯಲ್ಲೂ ಗೊಂದಲದ ಮಾತಿಲ್ಲ; ವಿಪಕ್ಷಗಳಿಗೆ ಖಡಕ್ ಉತ್ತರ ನೀಡಿದ ಸಿಎಂ ಬೊಮ್ಮಾಯಿ

ಬೆಂಗಳೂರು: ಡ್ರಗ್ಸ್ ವಿರುದ್ಧ ಸಮರ ಸಾರಿದ್ದೇನೆ. ಡ್ರಗ್ಸ್ ಪ್ರಕರಣದಲ್ಲಿ ಎಷ್ಟೇ ಪ್ರಭಾವಿಗಳಿದ್ದರೂ ಯಾರನ್ನು ರಕ್ಷಿಸುವ ಪ್ರಶ್ನೇಯೇ ಇಲ್ಲ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಿಎಂ, ಕಳೆದ 2 ವರ್ಷಗಳಿಂದ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಅತಿ ಹೆಚ್ಚು ಕೇಸ್ ಗಳು ದಾಖಲಾಗಿವೆ. ವಶಪಡಿಸಿಕೊಂಡ ಡ್ರಗ್ಸ್ ನಲ್ಲಿ ಶೇ.50ರಷ್ಟು ನಾಶ ಮಾಡಿದ್ದೇವೆ. ಡ್ರಗ್ಸ್ ಪ್ರಕರಣದಲ್ಲಿ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದರು.

ಇನ್ನು ಡ್ರಗ್ಸ್ ಹಾಗೂ ಬಿಟ್ ಕಾಯಿನ್ ಪ್ರಕರಣದ ಆರೋಪಿ ಶ್ರೀಕೃಷ್ಣ ವಿರುದ್ಧ 2018ರಲ್ಲಿ ಕಬ್ಬನ್ ಪಾರ್ಕ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಆತನ ವಿರುದ್ಧ ಎಫ್ ಐ ಆರ್ ಕೂಡ ದಾಖಲಾಗಿದೆ ಆದರೂ ಆತನನ್ನು ಬಂಧಿಸಿರಲಿಲ್ಲ. ಜಾಮೀನು ಪಡೆಯಲು ಆತನಿಗೆ ಅವಕಾಶ ಸಿಕ್ಕಿತ್ತು. ಆತನನ್ನು ಬಂಧಿಸಿ ಅಂದೇ ವಿಚಾರಣೆಗೊಳಪಡಿಸಬೇಕಿತ್ತು. ಯುಬಿ ಸಿಟಿಯಲ್ಲಿ ನಡೆದ ದಾಂಧಲೆ ಕೇಸ್ ನಲ್ಲಿಯೇ ವಿಚಾರಣೆ ನಡೆಸಬೇಕಿತ್ತು. ಆಗಲೇ ವಿಚಾರಣೆ ನಡೆಸಿದ್ದರೆ ಇಂದು ಇಲ್ಲಿಯವರೆಗೆ ಬಂದು ನಿಲ್ಲುತ್ತಿರಲಿಲ್ಲ ಎಂದು ಹೇಳಿದರು.

ದೇಶದ ಜನತೆಗೆ ಗುಡ್ ನ್ಯೂಸ್: ಮೋದಿ ಸರ್ಕಾರದಿಂದ ಮತ್ತೊಂದು ಕ್ರಾಂತಿಕಾರಿ ಹೆಜ್ಜೆ: ಕಡತ ವಿಲೇವಾರಿಗೆ ಹೊಸ ವ್ಯವಸ್ಥೆ

ಆಗ ಅದ್ಯಾವ ಕಾರಣಕ್ಕೆ ಶ್ರೀಕೃಷ್ಣನನ್ನು ಬಂಧಿಸಿಲ್ಲ ಎಂಬುದು ಗೊತ್ತಿಲ್ಲ. ನಾವು 2020ರಲ್ಲಿ ಡ್ರಗ್ಸ್ ವಿರುದ್ಧ ವಾರ್ ಡಿಕ್ಲೇರ್ ಮಾಡಿದ್ದೆವು. ಶ್ರೀಕೃಷ್ಣ ಸೇರಿದಂತೆ ಡ್ರಗ್ಸ್ ಪ್ರಕರಣದಲ್ಲಿದ್ದ ಹಲವರನ್ನು ನಾವು ಬಂಧಿಸಿದ್ದೇವೆ. ಪ್ರಭಾವಿಗಳನ್ನು ಕೂಡ ಬಿಟ್ಟಿಲ್ಲ ಎಂದು ಹೇಳಿದರು.

ಇದೇ ವೇಳೆ ಬಿಟ್ ಕಾಯಿನ್ ಕೇಸ್ ತನಿಖೆಯಲ್ಲಿ ಯಾವುದೇ ಗೊಂದಲಗಳಿಲ್ಲ. ತಪ್ಪಿತಸ್ಥರು ಎಷ್ಟೇ ಪ್ರಭಾವಿಗಳಿದ್ದರೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಇದರಲ್ಲಿ ಯಾವುದೇ ರಾಜಿ ಪ್ರಶ್ನೆ ಇಲ್ಲ ಎಂದು ಸ್ಪಷ್ಟಪಡಿಸಿದರು.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...