alex Certify BIG NEWS: ತಂತ್ರಕ್ಕೆ ಪ್ರತಿತಂತ್ರ; ಕುತೂಹಲ ಮೂಡಿಸಿದ ರಮೇಶ್ ಜಾರಕಿಹೊಳಿ ರಹಸ್ಯ ಸಭೆ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS: ತಂತ್ರಕ್ಕೆ ಪ್ರತಿತಂತ್ರ; ಕುತೂಹಲ ಮೂಡಿಸಿದ ರಮೇಶ್ ಜಾರಕಿಹೊಳಿ ರಹಸ್ಯ ಸಭೆ

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ವಿಚಾರದ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿರುವ ಶಾಸಕ ರಮೇಶ್ ಜಾರಕಿಹೊಳಿ ವಿರೋಧಿಗಳಿಗೆ ಪ್ರತಿತಂತ್ರ ಹೆಣೆಯಲು ಮಹತ್ವದ ಸಭೆ ನಡೆಸಿದ್ದಾರೆ.

ಸಚಿವ ಉಮೇಶ್ ಕತ್ತಿ ನೇತೃತ್ವದಲ್ಲಿ ನಿನ್ನೆ ಬೆಳಗಾವಿಯಲ್ಲಿ ಬಿಜೆಪಿ ನಾಯಕರ ಗೌಪ್ಯ ಸಭೆ ನಡೆಸಲಾಗಿತ್ತು. ಜಾರಕಿಹೊಳಿ ಸಹೋದರರನ್ನು ಬದಿಗಿಟ್ಟು ಸಭೆ ನಡೆಸಲಾಗಿತ್ತು. ಇದೀಗ ಉಮೇಶ್ ಕತ್ತಿ ನೇತೃತ್ವದಲ್ಲಿ ನಡೆದ ಸಭೆಗೆ ಪ್ರತಿಯಾಗಿ ರಮೇಶ್ ಜಾರಕಿಹೊಳಿ ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ರಹಸ್ಯ ಸಭೆ ನಡೆಸಿದ್ದು, ಕುತೂಹಲಕ್ಕೆ ಕಾರಣವಾಗಿದೆ.

ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮಹೇಶ್ ಕುಮಟಳ್ಳಿ ಸೇರಿದಂತೆ ಹಲವು ಬಿಜೆಪಿ ನಾಯಕರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಸುಮಾರು ಎರಡು ಗಂಟೆಗಳ ಕಾಲ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಒಟ್ಟಾರೆ ಜಾರಕಿಹೊಳಿ ಸಹೋದರರು ಪಕ್ಷ ವಿರೋಧಿಗಳ ವಿರುದ್ಧ ಪ್ರತಿತಂತ್ರ ಹೆಣೆಯಲು ಸಜ್ಜಾಗಿದ್ದು, ಸಂಪುಟ ವಿಸ್ತರಣೆ ಚರ್ಚೆ ನಡುವೆಯೇ ಬಿಜೆಪಿ ನಾಯಕರ ರಹಸ್ಯ ಸಭೆಗಳು ರಾಜ್ಯ ರಾಜಕೀಯದ ಮಹತ್ವದ ಬೆಳವಣಿಗೆಗೆ ಸಾಕ್ಷಿಯಾಗಿವೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...